ಹಾವೇರಿ: ಕುಡಿಯುವ ನೀರಿನ ಸಮಸ್ಯೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು, ಪಂಚಾಯಿತಿ ಕಟ್ಟಡದಲ್ಲಿರುವ ಪಿಡಿಒ (ಪಂಚಾಯಿತಿ ಅಭಿವೃದ್ಧಿ ಅಧಿಕಾರಿ) ( PDO office) ಕೊಠಡಿಯೊಳಗೆ ಹಸು (cow) ಕಟ್ಟಿ ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆ ಹಾವೇರಿ(haveri) ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ.
ಕಡೂರು ಗ್ರಾಮ ಪಂಚಾಯಿತಿ ಮುತ್ತಿಗೆ ಹಾಕಿದ್ದ ಗ್ರಾಮಸ್ಥರು, ಪಿಡಿಒ ಹಾಗೂ ಕಾರ್ಯದರ್ಶಿ ಅವರನ್ನು ತರಾಟೆಗೆ ತೆಗೆದುಕೊಂಡರು. ಅವರ ಕುರ್ಚಿಯ ಎದುರೇ ಹಸು ಕಟ್ಟಿ ಮೇವು ಹಾಕಿದರು. ನೀರು ಪೂರೈಕೆಗಾಗಿ ಆಗ್ರಹಿಸಿದರು.


