ಹಾಸನ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಚಾವುಂಡರಾಯ ಪ್ರಶಸ್ತಿ ಪ್ರದಾನ ಮಾಡಲಾಯ್ತು. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ದಿಗಂಬರ ಜೈನ ಮಠದಲ್ಲಿ ಅಂಬಿಕಾ ವಿದ್ಯಾಲಯವನ್ನು ದೇವೇಗೌಡ ಉದ್ಘಾಟಿಸಿದರು.
ಈ ವೇಳೆ ಶ್ರವಣಬೆಳಗೊಳದ ದಿಗಂಬರ ಜೈನ ಮಠದಿಂದ ದೇವೇಗೌಡ್ರಿಗೆ ಜೈನಮಠದ ಸ್ವಸ್ತ್ತಿಶ್ರೀ ಚಾರೂಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಶ್ರೀಗಳು ಚಾವುಂಡರಾಯ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾರ್ಯಕ್ರಮದಲ್ಲಿ ಜೈನಮಠ ಶ್ರವಣಬೆಳಗೊಳದ ಚಾರೂಕೀರ್ತಿ ಭಟ್ಟಾರಕ ಮಹಾಸ್ವಾಮಿ ಹಾಗೂ ಜೈನಮಠ ಕನಕಗಿರಿಯ ಭುವನ ಕೀರ್ತಿ ಭಟ್ಟಾರಕ ಶ್ರಿಗಳು, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಶಾಸಕರಾದ ಸಿ.ಎನ್.ಬಾಲಕೃಷ್ಣ, ಸ್ವರೂಪ್ ಪ್ರಕಾಶ್ ಉಪಸ್ಥಿತರಿದ್ದರು.


