Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ 

Advertisement

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಇಂದು ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸೋಮವಾರ ಬೆಳಗ್ಗೆ ಏಳು ಗಂಟೆಯಿಂದ 9:30ವರೆಗೆ ಹೊಳೆನರಸೀಪುರದ ಹೆಚ್.ಡಿ. ರೇವಣ್ಣನವರ ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಹರದನಹಳ್ಳಿ ಮಾವಿನಕೆರೆಯ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು.

 ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್, ಶಿವರಾಜ್ ಸಿಂಗ್ ಚೌಹಾಣ್, ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಭಾನುವಾರ ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ಹೊಳೆನರಸೀಪುರಕ್ಕೆ ಚೆನ್ನಮ್ಮನವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಯಿತು.

ಬೆಳಗಿನ ಜಾವ 4.30ಕ್ಕೆ ಹೊಳೆನರಸೀಪುರಕ್ಕೆ ಆಗಮಿಸಿದ್ದು, ಕುಟುಂಬದವರು ಪೂಜೆ ಸಲಲ್‌ಇಸಿದ ನಂತರ ದೇವೇಗೌಡರ ಹುಟ್ಟೂರು ಹರದನಹಳ್ಳಿ ಸಮೀಪದ ಮಾವಿನಕೆರೆ ಬೆಟ್ಟದ ತಪ್ಪಲಿನ ಕ್ಯಾತನಹಳ್ಳಿ ಬಳಿ ಇರುವ ಸ್ವಂತ ಜಮೀನಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಭಾರಿ ಜನ ಸೇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆನರಸೀಪುರದಲ್ಲಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ವರ್ತಕರು ಮಧ್ಯಾಹ್ನದವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮನವರ ಅಂತ್ಯಕ್ರಿಯೆ ನೆರವೇರಲಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST