Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರದಲ್ಲಿ ತ್ರಿಭಾಷಾ ಸೂತ್ರ ಜಾರಿ ಮಾಡುವುದಿಲ್ಲ : ದೇವೇಂದ್ರ ಫಡ್ನವೀಸ್

Advertisement

ಮುಂಬೈ : ಮಹಾರಾಷ್ಟ್ರದಲ್ಲಿ ಹಿಂದಿ ಹೇರಿಕೆ ಹಾಗೂ ತ್ರಿಭಾಷಾ ಸೂತ್ರ ಜಾರಿ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ತ್ರಿಭಾಷಾ ಸೂತ್ರ ಜಾರಿ ಮಾಡುವುದಿಲ್ಲ ಎಂದಿದ್ದಾರೆ.


ಮಹಾರಾಷ್ಟ್ರ ಸರ್ಕಾರ ಇಂದು ತ್ರಿಭಾಷಾ ನೀತಿಯ ಕುರಿತಾದ ಸರ್ಕಾರಿ ನಿರ್ಣಯಗಳನ್ನು ರದ್ದುಗೊಳಿಸಿದೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾಷಾ ಸೂತ್ರ ಅನುಷ್ಠಾನದ ಕುರಿತು ಸಮಿತಿ ರಚಿಸಿದ್ದಾರೆ.

ಪದೇ ಪದೇ ತ್ರಿಭಾಷಾ ಸೂತ್ರದ ಬಗ್ಗೆ ಮಾತನಾಡುವ ಉದ್ಧವ್ ಠಾಕ್ರೆ, 1ನೇ ತರಗತಿಯಿಂದ ತ್ರಿಭಾಷಾ ನೀತಿಯನ್ನು ಜಾರಿಗೆ ತರುವ ಕುರಿತು ಮಾಶೇಲ್ಕರ್ ಸಮಿತಿಯ ಸಲಹೆಗಳನ್ನು ಒಪ್ಪಿಕೊಂಡಿದ್ದರು' ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಿಡಿಕಾರಿದ್ದಾರೆ.

ಜೂನ್ 27 ರ ಶುಕ್ರವಾರದಂದು, ಮರಾಠಿ ಭಾಷೆಗೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡುವ ಭಾಷಾ ಸಲಹಾ ಸಮಿತಿಯು, ಹಿಂದಿ ಸೇರಿದಂತೆ ಯಾವುದೇ ಮೂರನೇ ಭಾಷೆಯನ್ನು 5ನೇ ತರಗತಿಯ ಮೊದಲು ಕಲಿಸಬಾರದು ಎಂದು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದೆ.

ತ್ರಿಭಾಷಾ ಸೂತ್ರಕ್ಕೆ ಮಿತ್ರಪಕ್ಷಗಳ ವಿರೋಧ

ವಿಧಾನಸಭೆಯ ಮುಂಗಾರು ಅಧಿವೇಶನದ ಮುನ್ನಾದಿನ ಮಾತನಾಡಿರುವ ಡಿಸಿಎಂ ಅಜಿತ್ ಪವಾರ್, 'ಒಂದನೇ ತರಗತಿಯಿಂದಲೇ ಹಿಂದಿ ಕಲಿಕೆ ಕಡ್ಡಾಯಗೊಳಿಸುವ ಕ್ರಮವನ್ನು ಬೆಂಬಲಿಸುವುದಿಲ್ಲ. ಆದರೆ, 5ನೇ ತರಗತಿಯಿಂದ ಮೂರನೇ ಭಾಷೆ ಆಯ್ಕೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ತೀರ್ಮಾನಿಸಬಹುದು' ಎಂದಿದ್ದಾರೆ. ಹಾಗೆಯೇ, '1ನೇ ತರಗತಿಯಿಂದ ನಾವು ಹಿಂದಿ ಹೇರಿಕೆ ಪರವಾದ ನಿಲುವು ಹೊಂದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

'ಹಿಂದಿ ಭಾಷೆ ಕಲಿಕೆ ಕಡ್ಡಾಯವಿಲ್ಲ. ಆಯಾ ರಾಜ್ಯದ ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯನ್ನು ಕಲಿಯಬೇಕು ಎಂಬುದರಲ್ಲಿ ನಂಬಿಕೆ ಹೊಂದಿದ್ದೇವೆ. ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಓದುವವರು ಮರಾಠಿ ಭಾಷೆ ಕಲಿಯುವುದು ಕಡ್ಡಾಯವಾಗಿದೆ.

ಐದನೇ ತರಗತಿಯಿಂದ ಹಿಂದಿ ಕಲಿಯುವ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಆಲೋಚಿಸಿ, ನಿರ್ಧಾರ ಕೈಗೊಳ್ಳಬೇಕು' ಎಂದು ಪವಾರ್ ಹೇಳಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ