Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈದ್ಗಾ ಮೈದಾನದಲ್ಲಿ ಶ್ರದ್ದಾಭಕ್ತಿಯಿಂದ ಬಕ್ರೀದ್ ಹಬ್ಬ ಆಚರಣೆ

Advertisement
ಸಿರುಗುಪ್ಪ : -ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲೀಮ್ ಭಾಂದವರು ಸೋಮವಾರ ತಾಲೂಕಿನೆಲ್ಲೆಡೆ ಶ್ರದ್ದಾ ಭಕ್ತಿಯಿಂದ ಆಚರಿಸಿದರು.
ಹಬ್ಬದ ಪ್ರಯುಕ್ತ ನಗರದ ಕೆಂಚನಗುಡ್ಡ ರಸ್ತೆಯಲ್ಲಿನ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.



ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ಹಾಜಿ ಹುಸೇನ್‌ಸಾಬ್ ಯಾದವಾಡ ಅವರು ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿ ಮುಖಂಡರೊಂದಿಗೆ ಶುಭಾಶಯಗಳ ವಿನಿಮಯ ಮಾಡಿಕೊಂಡರು.ಕಾರ್ಯಕ್ರಮದಲ್ಲಿ ಶಾಸಕ ಬಿ.ಎಮ್.ನಾಗರಾಜ ಅವರು ಮಾತನಾಡಿ ನಮ್ಮ ಕ್ಷೇತ್ರದಲ್ಲಿ ಉತ್ತಮ ಮಳೆ ಬೆಳೆಯಾಗಲೆಂದು ಭಗವಂತನಲ್ಲಿ ಪ್ರಾರ್ಥಿಸೋಣ. ಸಮಾಜದಲ್ಲಿ ಎಲ್ಲರೂ ಸಹೋದರರಂತೆ ಬಾಳೋಣ ಯಾರೋ ಹಬ್ಬಿಸುವ ವದಂತಿಗಳಿಗೆ ಕಿವಿಗೊಡದೇ ಉತ್ತಮ ಸಮಾಜವನ್ನು ನಿರ್ಮಿಸೋಣ.

ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಷಾದಿಮಹಲ್ ನಿರ್ಮಾಣಕ್ಕಾಗಿ ಎಲ್ಲಾ ಮುಖಂಡರು ಬೇಡಿಕೆ ಸಲ್ಲಿಸಿದ್ದೀರಿ, ಸರ್ಕಾರದಿಂದ 2 ರಿಂದ 5ಕೋಟಿ ಅನುದಾನ ತಂದು ತಂದು ವಕ್ಫ್ ಬೋರ್ಡ್ ಕಡೆಯಿಂದ ಜಾಗವನ್ನು ಖರೀದಿಸಿ ನಿರ್ಮಾಣ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದರು.ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಸಮುದಾಯದ ವಿದ್ಯಾರ್ಥಿಗಳು ಹಾಗೂ ಅವರ ಪರವಾಗಿ ಪೋಷಕರನ್ನು ಸನ್ಮಾನಿಸಲಾಯಿತು.



ಇದೇ ವೇಳೆ ಮೌಲ್ವಿ ಖತೀಬ್ ಅಮೀಷ್ ಭಾಷ, ಖತೀಬ್ ಜಹಿರುದ್ದೀನ್ ಬಾಬಾ, ವಕ್ಫ್ ಬೋರ್ಡ್ ಜಿಲ್ಲಾ ಉಪಾಧ್ಯಕ್ಷ ಎನ್.ಖಾಜಾಸಾಬ್, ಸದಸ್ಯ ಮೀರಾ ಹುಸೇನ್, ಹಿರಿಯ ವಕೀಲರಾದ ಎನ್.ಅಬ್ದುಲ್‌ಸಾಬ್, ನಗರಸಭೆ ಸದಸ್ಯ ಗಣೇಶ, ಮುಖಂಡರಾದ ಹಂಡಿ ಆಸಿಮ್‌ಸಾಬ್, ಹಂಡಿ ಬಾಷಾಸಾಬ್ ಚಿಟಿಗಿ ಹುಸೇನ್‌ಸಾಬ್, ವೆಂಕಟೇಶ ಇನ್ನಿತರ ಪದಾಧಿಕಾರಿಗಳು ಇದ್ದರು.

ವರದಿ :-ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ