Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿ ಟನ್‌ ಕಬ್ಬಿಗೆ ₹3,500 ದರ ನಿಗದಿಪಡಿಸಲು ರೈತರ ಒತ್ತಾಯ

Advertisement
ಯರಗಟ್ಟಿ: ಪ್ರತಿ ಟನ್‌ ಕಬ್ಬಿಗೆ ₹3,500 ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತಿದಲ್ಲಿ ಬೆಳಗಾವಿ–ಬಾಗಲಕೋಟೆ, ಗೋಕಾಕ-ಸವದತ್ತಿ ರಾಜ್ಯ ಹೆದ್ದಾರಿ ತಡೆದು ಭಾನುವಾರ ಪ್ರತಿಭಟಿಸಿದ ರೈತರು.

ತಾಲೂಕಿನ ವಿವಿಧೆಡೆಯಿಂದ ಬಂದಿದ್ದ ರೈತರು, ಸಕ್ಕರೆ ಕಾರ್ಖಾನೆಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಒಂದು ತಾಸಿಗೂ ಹೆಚ್ಚು ಹೊತ್ತು ರಸ್ತೆತಡೆ ನಡೆಸಿದ್ದರಿಂದ ವಾಹನ ಸವಾರರು ಪರದಾಡಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಸಿಂಧೂರ ತೆಗ್ಗಿ ಮಾತನಾಡಿದ ಅವರು ಸಕ್ಕರೆ ಕಾರ್ಖಾನೆಗಳು ಟನ್‌ ಕಬ್ಬಿಗೆ ₹3,500 ನೀಡಬೇಕು ಎಂದು ಒತ್ತಾಯಿಸಿ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಅದನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ತಾಲೂಕು ಕೇಂದ್ರದ ಮೂಲಕ ಹೋರಾಟ ಮಾಡುತ್ತಿದ್ದೇವೆ’ ಎಂದರು.

‘ನ್ಯಾಯಯುತವಾದ ದರ ಸಿಗದೆ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನೆರವಿಗೆ ಧಾವಿಸಬೇಕಿದ್ದ ಜಿಲ್ಲಾಡಳಿತ ಏನು ಮಾಡುತ್ತಿದೆ’ ಎಂದು ಪ್ರಶ್ನಿಸಿದ ಅವರು, ‘ನಮ್ಮ ಬೇಡಿಕೆಯಂತೆ ಪ್ಯಾಕ್ಟರಿ ಮಾಲಕರು ಕಬ್ಬಿಗೆ ದರ ನಿಗದಿಪಡಿಸಬೇಕು. ಬಳಿಕ ಕಬ್ಬು ನುರಿಸುವ ಹಂಗಾಮು ಆರಂಭಿಸಬೇಕು’ ಎಂದು ಒತ್ತಾಯಿಸಿದರು.

ನಂತರ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಹಾಗೂ ಸಿಪಿಐ ಆಯ್ ಎಂ ಮಠಪತಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದರು.

ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಬಿಜ್ಜೂರ, ಯಲ್ಲನಾಯ್ಕ ನಾಯ್ಕರ, ಶಂಕರ ಬಗನಾಳ, ಮಾಯಪ್ಪ ಜಿಂಗಿ, ಸೋಮು ರೈನಾಪೂರ ಇತರರಿದ್ದರು.
ವರದಿ: ಈರಣ್ಣಾ ಹೂಲ್ಲೂರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ