Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಕೇಸ್ ನಲ್ಲಿ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ

Advertisement
ಬೆಂಗಳೂರು : 'ಧರ್ಮಸ್ಥಳ ಕೇಸ್' ನಲ್ಲಿ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ.! ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಚಿವುಟುವುದೂ ಬಿಜೆಪಿ, ತೊಟ್ಟಿಲು ತೂಗುವುದೂ ಬಿಜೆಪಿ! ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ!

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯ ಎಂಬ ಎರಡು ತಲೆಯ ಹಾವು ಎರಡು ಕಡೆಯೂ ಹೆಡೆ ಆಡಿಸುತ್ತಿದೆ, ಬಿಜೆಪಿ ಆರೋಪಿಸುತ್ತಿರುವ ವ್ಯಕ್ತಿಗಳೂ ಬಿಜೆಪಿಯವರೇ, – ಗಿರೀಶ್ ಮಟ್ಟಣ್ಣನವರ್, ಬಿಜೆಪಿಯ ಸಕ್ರಿಯ ಕಾರ್ಯಕರ್ತ, ಯುವಮೋರ್ಚಾದ ಅಧ್ಯಕ್ಷರಾಗಿದ್ದವರು, 2013ರಲ್ಲಿ ಗುರ್ಮಿಟ್ಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದವರು. – ಮಹೇಶ್ ಶೆಟ್ಟಿ ತಿಮರೋಡಿ, ಬಿಜೆಪಿ ಪಕ್ಷದಲ್ಲೇ ಇದ್ದವರು, ಸಂಘಪರಿವಾರದ ನಾಯಕರು, ಸದಾ ಸಾವರ್ಕರ್, ಗೋಲ್ವಾಲ್ಕರ್ ಫೋಟೋ ಇಟ್ಟುಕೊಂಡಿರುವವರು, ಕೇಸರಿ ಶಾಲು ಹಾಕಿಕೊಂಡಿರುವವರು.

ಸಾವರ್ಕರ್ ಅನುಯಾಯಿಯ ಬಗ್ಗೆಯೇ ಬಿಜೆಪಿಗೆ ಅಸಹನೆ ಹೊಂದಿರುವುದು ಪರಮಾಶ್ಚರ್ಯ. ಇವರೆಲ್ಲಾ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಬಣದವರಲ್ಲವೇ? ಅವರ ಅಣತಿಯಂತೆಯೇ ಇವರ ಹೋರಾಟ ನಡೆಯುತ್ತಿರುವುದಲ್ಲವೇ? ಬಿಜೆಪಿ ನಾಯಕರು ಉತ್ತರಿಸಬೇಕು.

ಬಿಜೆಪಿಯ “ಧರ್ಮಸ್ಥಳ ಚಲೋ” ವೇದಿಕೆಯಲ್ಲಿ ಕರಾವಳಿಯ ಭಾಗದ ನಾಯಕರು ಮಾತನಾಡದೆ ವೇದಿಕೆ ಬಿಟ್ಟು ಹೋಗಿದ್ದೇಕೆ? ಕಲ್ಲಡ್ಕ ಪ್ರಭಾಕರ್ ಭಟ್ ಕಾಣಿಸಿಕೊಂಡಿಲ್ಲ ಏಕೆ? ಇದುವರೆಗೂ ಪ್ರಭಾಕರ್ ಭಟ್ ಧರ್ಮಸ್ಥಳದ ಪರವಾಗಿ ಒಂದೇ ಒಂದು ಹೇಳಿಕೆ ನೀಡದಿರುವುದೇಕೆ? ಕಲ್ಲಡ್ಕ ಭಟ್ಟರಿಗೆ “ಧರ್ಮಸ್ಥಳ” ಬೇಡವಾಗಿದೆಯೇ? ಧರ್ಮಸ್ಥಳ ಇಂದು ಇಬ್ಬರು ಸಂಘಪರಿವಾರದ ಮುಖಂಡರ ಪ್ರತಿಷ್ಠೆಯ #RSSvsRSS ಕಾಳಗದ ಕಣವಾಗಿದೆ, ಹೀಗಿರುವಾಗ ಬಿಜೆಪಿಯ ಹೋರಾಟ, ಹಾರಾಟ, ಚೀರಾಟ ಯಾರ ವಿರುದ್ಧ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ