Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಂಗನ ಕಾಯಿಲೆಗೆ ಶೀಘ್ರದಲ್ಲಿ ಲಸಿಕೆ ಲಭ್ಯವಾಗಲಿದೆ : ದಿನೇಶ್ ಗುಂಡೂರಾವ್

Advertisement
ಬೆಂಗಳೂರು : ಮಂಗನ ಕಾಯಿಲೆಗೆ ಲಸಿಕೆ ತಯಾರಿಸಲು ಹೈದರಾಬಾದ್‌ನಲ್ಲಿನ ಐಸಿಎಂಆರ್‌ನಲ್ಲಿ ಸಂಶೋಧನೆ ನಡೆಸಲಾಗುತ್ತಿದೆ. ಮುಂದಿನ ವರ್ಷದ ವೇಳೆಗೆ ಪರಿಣಾಮಕಾರಿ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂ ರಾವ್ ಭರವಸೆ ನೀಡಿದರು.

ವಿಧಾನಸಭೆ ಪ್ರತ್ಯೋತ್ತರ ವೇಳೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಅರಗಜ್ಞಾನೇಂದ್ರ, ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ ಹಾಗೂ ಡೆಂಗೂ ಸಮಸ್ಯೆ ತೀವ್ರವಾಗಿದೆ. ಮಂಗನಕಾಯಿಲೆಗೆ ಔಷಧಿ ಉತ್ಪಾದಿಸುವ ಘಟಕ "ಗಿತಗೊಂಡಿದೆ. 1957ರಿಂದಲೂ ಮಂಗನಕಾಯಿಲೆ ಕಾಡುತ್ತಿದೆ. ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಸರ್ಕಾರ ನಿರ್ಲಕ್ಷ್ಯ ವಹಿಸದೇ ಕೂಡಲೇ ಲಸಿಕೆ ಅಭಿವೃದ್ಧಿ ಪಡಿಸಬೇಕು. ಜೊತೆಗೆ ಮಲೆನಾಡು ಭಾಗದಲ್ಲಿ ವೈದ್ಯರ ಕೊರತೆ ಇರುವುದರಿಂದ ಸಂಚಾರಿ ಚಿಕಿತ್ಸಾ ಘಟಕ ಆರಂಭಿಸಿ ಎಂದು ಒತ್ತಾಯಿಸಿದರು.

ಉತ್ತರ ನೀಡಿದ ಸಚಿವರು, ಡೆಂಗೂ ಮಳೆಗಾಲದಲ್ಲಿ ಹೆಚ್ಚು ಕಾಡುತ್ತಿದೆ. ಮಂಗನಕಾಯಿಲೆ ಬೇಸಿಗೆ ಕಾಲದಲ್ಲಿ ಹೆಚ್ಚಾಗುತ್ತದೆ. ಮುಂಜಾಗೃತಾ ಕ್ರಮಕ್ಕಾಗಿ ಮಲೆನಾಡು ಹಾಗೂ ಕರಾವಳಿ ಭಾಗದ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಅಗತ್ಯವಾದ ಔಷಧಿ ದಾಸ್ತಾನು ಮಾಡಲಾಗಿದೆ. ಮಂಗನಕಾಯಿಲೆಯಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಅವರಿಗೆ ಕಿಡಿ ಸೇರಿದಂತೆ ಬೇರೆ ಆರೋಗ್ಯ ಸಮಸ್ಯೆಗಳಿದ್ದವು ಎಂದರು.ಮಂಗನಕಾಯಿಲೆಗೆ ನಿರ್ದಿಷ್ಟ ಔಷಧಿ ಇಲ್ಲ. ಮುಂಜಾಗ್ರತೆ ಉತ್ತಮ ಪರಿಹಾರ. ಈ ಹಿಂದೆ ಪುಣೆಯ ವೈರಲಾಜಿ ಸಂಸ್ಥೆ 1989ರಲ್ಲಿ ಲಸಿಕೆ ಕಂಡು ಹಿಡಿದಿತ್ತು.

ಈಗ ಔಷಧಿಯ ಪ್ರಭಾವ ಕಡಿಮೆಯಾಗಿದೆ. ಹೊಸದಾಗಿ ಲಸಿಕೆ ಕಂಡು ಹಿಡಿಯಲು ಹೈದರಾಬಾದ್‌ನ ಐಸಿಎಂಆರ್‌ಲಸಿಕೆ ಅಭಿವೃದ್ಧಿ ಪಡಿಸುತ್ತಿದೆ ಎಂದು
ಹೇಳಿದರು.ಮಂಗನಕಾಯಿಲೆ ರಾಜ್ಯಕ್ಕೆ ಮಾತ್ರ ಸೀಮಿತವಾಗಿದೆ. ಹಾಗಾಗಿ ಲಸಿಕೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹಣಕಾಸಿನ ಸೌಲಭ್ಯ ಒದಗಿಸಲು ವಿಳಂಬವಾಯಿತು ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ