LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್:ಬಾಲರಾಜ್ ಗುತ್ತೇದಾರ

Advertisement
ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ :ಗುತ್ತೇದಾರ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ, ಇದರಿಂದ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಬಹಳ ದೊಡ್ಡ ಪರಿಣಾಮ ಬೀರಲಿದೆ ಎಂದು ಕಲಬುರಗಿ ಜಿಲ್ಲಾ ಜೆಡಿಎಸ್ ಪಕ್ಷದ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಹೇಳಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಕಳಪೆ ಬಜೆಟ್, ಅಭಿವೃದ್ದಿ ಶೂನ್ಯ ಪ್ರಗತಿ ರಹಿತವಾದ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್, 1.32 ಲಕ್ಷ ಕೋಟಿ ಸಾಲ ಮಾಡಿ ಸುಮಾರು 25 ಸಾವಿರ ಕೋಟಿ ರೂ. ಹೊಸ ತೆರಿಗೆ ಹಾಕಿ 22 ಸಾವಿರ ಕೋಟಿ ರೂ. ಕೊರತೆ ಬಜೆಟ್ ಮಂಡನೆ ಮಾಡಿದ್ದಾರೆ. ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್. ಇದರಿಂದ ರಾಜ್ಯದ ಹಣಕಾಸಿನ ಮೇಲೆ ಬಹಳ ದೊಡ್ಡ ಪರಿಣಾಮ ಬೀರಲಿದೆ. ರಾಜ್ಯವನ್ನು ಹತ್ತರಿಂದ 15 ವರ್ಷ ಹಿಂದೆ ತೆಗೆದುಕೊಂಡು ಹೋಗುತ್ತದೆ. ಇದರಿಂದ ನಿರಾಸೆಯಾಗಿದೆ 17 ಬಾರಿ ಬಜೆಟ್ ಮಂಡನೆ ಮಾಡಿರುವ ಸಿಎಂರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.
ಉದಾಹರಣೆಗೆ ನೀರಾವರಿಗೆ ಕೇವಲ 22 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ 25 ಸಾವಿರ ಕೋಟಿ ರೂ. ಮೀಸಲಿಡಬೇಕಿತ್ತು. ಆದರೆ, ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಆರೋಗ್ಯ, ಗ್ರಾಮೀಣಾಭಿವೃದ್ಧಿಗೆ ಅನುದಾನ ಕಡಿಮೆ ಇದೆ. ಇವರು ಯಾವ ರೀತಿಯ ಬಜೆಟ್ ಮಂಡನೆ ಮಾಡುತ್ತಾರೆ ಎಂದು ಪ್ರಶ್ನಿಸಿದರು.
ಎಲ್ಲಾ ಇಲಾಖೆಗೆ ಹಣವನ್ನು ಕೆ,ಕೆ,ಆರ್,ಡಿ,ಬಿ ಇಂದಾನೆ ಕೊಡ್ತಾ ಇದಾರೆ ಬಜೆಟ್ ಮಂಡನೆ ಆಗಿದೆ ಅದನ್ನ ಇನ್ನೂ ತಿದ್ದು ಪಡಿ ಮಾಡಲು ಅವಕಾಶ ಇದೆ ಅದನ್ನ ಸರಿ ಪಡಿಸಬೇಕು ಖಾಲಿ ಹುದ್ದೆ ಭರ್ತಿ ಭರ್ತಿ ಮಾಡ್ತಾ ಇಲ್ಲ 3 ಲಕ್ಷದಷ್ಟು ಹುದ್ದೆಗಳು ಖಾಲಿ ಇವೆ ರಾಜ್ಯದಲ್ಲಿ ಆಡಳಿತ ಕುಸಿದಿದೆ ನೇಮಕಾತಿ ಮಾಡ್ಕೋತೀನಿ ಅಂತ ಹೇಳಿದ್ರಿ ಆದ್ರೆ ಇನ್ನೂ ಪ್ರಕ್ರಿಯೆ ಆರಂಭ ಆಗಿಲ್ಲ.-ಬಾಲರಾಜ್ ಗುತ್ತೇದಾರ  ಜೆಡಿಎಸ್ ಜಿಲ್ಲಾಧ್ಯಕ್ಷರು ಕಲಬುರಗಿ

ವರದಿ :ವೆಂಕಟಪ್ಪ ಕೆ ಸುಗ್ಗಾಲ್.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ