LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ಸಹಾಯವಾಣಿ ಪ್ರದರ್ಶನ ಕಡ್ಡಾಯ

Advertisement

ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ-ಸ್ವತ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.


ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು, ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ರಾಜ್ಯದ ಗ್ರಾಮ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು.

ಗ್ರಾಮೀಣ ಜನರು ಈ ಯೋಜನೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದ್ದು, ಸಾರ್ವಜನಿಕರಿಂದ ಬರುವ ದೂರುಗಳ ಬಗ್ಗೆ ವಿಶೇಷ ಆಸಕ್ತಿವಹಿಸಿ ಬಗೆಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇ-ಸ್ವತ್ತು ತಂತ್ರಾಂಶದಲ್ಲಿನ ಕೆಲವು ಲೋಪಗಳ ಬಗ್ಗೆ ಕೆಲವು ಸಿಇಒಗಳೊಂದಿಗೆ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಈ ಸಮಸ್ಯೆಗಳನ್ನು ಪರಿಹರಿಸಬೇಕೆಂದು ನಿರ್ದೇಶಿಸಲಾಗಿದೆ. ತಂತ್ರಾಂಶವನ್ನು ಎನ್.ಐ.ಸಿ ಸಿದ್ಧಪಡಿಸಿದ್ದು ಲೋಪಗಳನ್ನು ಸರಿಪಡಿಸಲು ಸೂಚಿಸಲಾಗಿದೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ-ಸ್ವತ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.ಇ-ಸ್ವತ್ತು ಬಗ್ಗೆ ಬರುವ ಯಾವುದೇ ದೂರುಗಳನ್ನು ಆದ್ಯತೆಯ ಮೇಲೆ ಪರಿಹರಿಸಿ ಅರ್ಜಿದಾರರಿಗೆ ಮಾಹಿತಿ ನೀಡಬೇಕೆಂದು ನಿರ್ದೇಶಿಸಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು