ಗುರುಮಠಕಲ್ : ಕೇಶ್ವಾರ ಯೋಟ್ ಫಾರ್ ಸೇವಾ ಸಂಸ್ಥೆಯ ವತಿಯಿಂದ ಕೇಶ್ವಾರ್ ಗ್ರಾಮದ ಶಾಲೆಯಲ್ಲಿ ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ 120ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ ಪೆನ್ನು ಪೆನ್ಸಿಲ್ ಸೇರಿದಂತೆ ವಿವಿಧ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯೂತ್ ಫಾರ್ ಸೇವಾ ಸಂಸ್ಥೆಯ ಸ್ವಯಂಸೇವಕ ನವದರೆಡ್ಡಿ ಅವರು ಸಂಸ್ಥೆಯ ಗುರಿ ಮತ್ತು ಉದ್ದೇಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಮತ್ತೋರ್ವ ಸ್ವಯಂಸೇವಕ ಶ್ಯಾಮ ಅವರು ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಪ್ರೇರೇಪಿಸಿದರು
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಶ್ರೀಮತಿ ಮೈಮುದ ಬೇಗಂ ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಕುಮಾರ್, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


