ಭಾಲ್ಕಿ, : ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರವೆಲ್ ಕೊರೆಸಿದ ಭಾಲ್ಕಿ ತಾಲೂಕಿನ ವಿವಿಧ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಇಂದು ಮೋಟಾರ್ ಹಾಗೂ ಪೈಪ್ ಸಾಮಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ರೈತರ ಅಭಿವೃದ್ಧಿಗೆ ಹಾಗೂ ನೀರಾವರಿ ಸೌಲಭ್ಯ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಗಂಗಾ ಕಲ್ಯಾಣ ಯೋಜನೆಯ ಮೂಲಕ ಸಣ್ಣ ರೈತರಿಗೆ ನೀರಿನ ಸೌಲಭ್ಯ ಒದಗಿಸಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಹೇಳಿದರು.
ಯೋಜನೆಯ ಸದುಪಯೋಗವನ್ನು ಪಡೆದುಕೊಂಡು ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಸಚಿವರು ಕರೆ ನೀಡಿದರು.

