LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರಿಂದ ಚಾಲನೆ

Advertisement
ಧಾರವಾಡ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರಣಿಗೆಗೆ ಇಂದು (ಏ.14) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಚಾಲನೆ ನೀಡಿದರು.

ವಿವಿಧ ಕಲಾತಂಡದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರದ ಭವ್ಯ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಪ್ರಾರಂಭವಾಗಿ ಧಾರವಾಡ ನಗರದ ಕೋರ್ಟ ಸರ್ಕಲ್, ಸಂಗಮ ಸರ್ಕಲ್, ಮದಾರಮಡ್ಡಿ, ಭೂಸಪ್ಪ ಚೌಕ, ಮೇದಾರ ಓಣಿ, ಕೆ.ಸಿ.ಸಿ ಬ್ಯಾಂಕ್ ಮೂಲಕ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದವರೆಗೆ ಜರುಗಿತು.



ಈ ಸಂದರ್ಭದಲ್ಲಿ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಎಡಿಸಿ ಗೀತಾ ಸಿ.ಡಿ., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಾಧರ ದೊಡಮನಿ, ಪಶು ಪಾಲನೆ ಇಲಾಖೆಯ ಉಪನಿರ್ದೇಶಕ ಡಾ.ಎಸ್.ವಿ.ಸಂತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಎಲ್ಲಾ ಸಮುದಾಯದ ಮುಖಂಡರು, ಗಣ್ಯವ್ಯಕ್ತಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಯಲ್ಲಿ ಜಾನಪದ ಕುಣಿತ, ಕರಡಿ ಮಜಲು, ನಂದಿಕೋಲು, ಜಗ್ಗಲಿಗಿ ಮೇಳ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ, ಮೆರವಣಿಗೆಯ ಮೆರಗು ಹೆಚ್ಚಿಸಿದವು.



ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹು-ಧಾ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು (ಏ.14) ಬೆಳಿಗ್ಗೆ ಆಲೂರು ವೆಂಕಟರಾವ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಸೇರಿದಂತೆ ವಿವಿಧ ಗಣ್ಯರಿಂದ ಮಾಲಾರ್ಪಣೆ ಮಾಡಲಾಯಿತು.



ವರದಿ:ವಿನಾಯಕ ಗುಡ್ಡದಕೇರಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಿಜೂರಾಮ್ ವಿರುದ್ಧ ಕರ್ನಾಟಕಕ್ಕೆ 7 ವಿಕೆಟ್ ಗಳ ಸುಲಭ ಗೆಲುವು ಜಿಪುಣನಾಗಿ ಮೃತಪಟ್ಟವನ ಬ್ಯಾಂಕ್ ನಲ್ಲಿತ್ತು 70 ಲಕ್ಷ ರೂ. : ಚಿಕಿತ್ಸೆಗೂ ಹಣ ಬಳಸದೆ ದುರಂತ ಅಂತ್ಯನಾನು ದೇವರನ್ನು ಪೂಜೆ ಮಾಡಲ್ಲ. ಆಗಂತ ದೇವರಿಲ್ಲ ಅಂತ ಹೇಳಲ್ಲ : ಸಿದ್ದರಾಮಯ್ಯ ಪೆಟ್ರೋಲ್ ನಲ್ಲಿ ಮಾತ್ರ ಎಥೆನಾಲ್ ಮಿಕ್ಸ್ ಮಾಡುತ್ತಿದ್ದೇವೆ : ಮುರುಗೇಶ್ ನಿರಾಣಿಮೋಸ್ಟ್ ವಾಂಟೆಡ್ ಲಷ್ಕರ್ ಕಮಾಂಡರ್ ಉಗ್ರ ಲತೀಫ್ ಭಟ್ ಎನ್ ಕೌಂಟರ್ಕಬ್ಬಿಗಾಗಿ ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿ:  ಕಬ್ಬು ಬೆಳೆಗಾರರಿಗೆ ಬಂಪರ್ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆದ್ದ ಇಂಗ್ಲೆಂಡ್ ಭಾರತ- ನ್ಯೂಜಿಲೆಂಡ್ ಮೊದಲ ಟೆಸ್ಟ್ ನಾಳೆಯಿಂದ ಆರಂಭಆರಾಧನಾ ಮಹೋತ್ಸವಕ್ಕೆ ಭಕ್ತರಿಗೆ ಆಹ್ವಾನ : ರಾಜಾ ವೆಂಕಟಪ್ಪನಾಯಕಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ : ನಾಲ್ವರು ಅಂತರರಾಜ್ಯ ಯುವತಿಯರ ರಕ್ಷಣೆ