LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ನಿಶ್ಚಿತ, ಗೆಲುವು ಖಚಿತ: ಶಾಸಕ ರಾಜು ಕಾಗೆ

Advertisement
ಕಾಗವಾಡ:ಜಿಲ್ಲಾ ಮಧ್ಯವರ್ತಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ನಿಶ್ಚಿತ ಮತ್ತು ನನ್ನ ಗೆಲುವು ಕೂಡ ನೂರಕ್ಕೆ ನೂರ ಇಪ್ಪತ್ತರಷ್ಟು ನಿಶ್ಚಿತ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
ಅವರು ಶನಿವಾರ ಕಾಗವಾಡ ವಿಧಾನಸಭಾ ಮತಕ್ಷೇತ್ರ ಚಮಕೇರಿ ಗ್ರಾಮದಲ್ಲಿ ಚಮಕೇರಿ - ಬ್ಯಾಡರಟ್ಟಿ - ಸಿಂಧೂರ ಗಡಿವರೆಗಿನ 9 ಕೋಟಿ ಅನುದಾನದ 8.77 ಕಿಲೋ ಮೀಟರ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಾ.ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಯಾರ ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಆದರೆ ಯಾರು ಅತೀ ಹೆಚ್ಚು ಮತಗಳನ್ನು ಪಡೆಯುತ್ತಾರೋ ಅವರೇ ಗೆಲುವು ಸಾಧಿಸುತ್ತಾರೆ ಎಂದ ಅವರು ಕಾಗವಾಡ ಕ್ಷೇತ್ರದಿಂದ ನಾನು ನಿಶ್ಚಿತವಾಗಿಯೂ ಸ್ಪರ್ಧೆ ಮಾಡುವೆ ಮತ್ತು ನನ್ನ ಗೆಲುವು ಕೂಡ ನಿಶ್ಚಿತ ಎಂದರು.
ರಾಜ್ಯದ ಮುಖ್ಯಮಂತ್ರಿಗಳು ಒಂದೊಂದು ವಿಧಾನ ಸಭಾ ಕ್ಷೇತ್ರಕ್ಕೆ 50 ಕೋಟಿ ವಿಶೇಷ ಅನುದಾನ ಬಿಡುಗಡೆಗೊಳಿಸಿದ್ದು, ಈ ಅನುದಾನದಲ್ಲಿ 25 ಕೋಟಿ ಲೋಕೋಪಯೋಗಿ ಇಲಾಖೆಗೆ, 12.5 ಪಂಚಾಯತ ರಾಜ್ಯ ಇಲಾಖೆಗೆ ಮತ್ತು ಇನ್ನುಳಿದ 12.5 ಕೋಟಿ ಶಾಸಕರ ನಿಧಿಗೆ ಹಂಚಿಕೆ ಮಾಡಲಾಗಿದೆ ಎಂದ ಅವರು ಇದೇ ಜುಲೈ 31 ರ ಒಳಗಾಗಿ ಮುಖ್ಯಮಂತ್ರಿಗಳಿಗೆ ಕಾಮಗಾರಿಗಳ ಪಟ್ಟಿ ಕೊಡಬೇಕು ಮತ್ತು ಈ ಎಲ್ಲ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಅಗಸ್ಟ 15 ರ ಒಳಗಾಗಿ ಪೂರ್ಣಗೊಳ್ಳಲಿದೆ ಎಂದರು.
ಚಮಕೇರಿ ಸಿಂಧೂರ ಗಡಿ ವರೆಗೆ 8.77 ಕಿಲೋ ಮೀಟರ, ರಸ್ತೆ ಸುಧಾರಣೆಗೆ 9 ಕೋಟಿ ಲೋಕೋಪಯೋಗಿ ಅನುದಾನದಲ್ಲಿ ಮತ್ತು ಪಂಚಾಯತ ರಾಜ ಇಲಾಖೆಯಡಿ 20 ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿರುವೆ ಎಂದ ಅವರು ಮುಂದಿನ ದಿನಗಳಲ್ಲಿ ಮತ್ತಷ್ಟು ಜನಪರ, ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಆದ್ಯತೆ ನೀಡುವೆ ಎಂದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಮಗದುಮ, ಜಿ.ಪಂ ಇಲಾಖೆಯ ವೀರಣ್ಣಾ ವಾಲಿ, ಮುಖಂಡರಾದ ಬಸವರಾಜ ಪಾಟೀಲ, ರಫಿಕ್ ಪಟೇಲ್, ಶಿವಪುತ್ರ ನಾಯಿಕ, ಅಮಸಿದ್ಧ ಮಂಗರೂಳ, ಬಸವರಾಜ ಮಗದುಮ್, ಸಿದ್ಧಾರೂಢ ನೇಮಗೌಡ, ರಾಜು ಮರಡಿ, ಸೋಹಿತ ಪಾಟೀಲ ಸೇರಿದಂತೆ ಇತರರು ಇದ್ದರು.

ವರದಿ: ಚಂದ್ರಕಾಂತ ಕಾಂಬಳೆ ಕಾಗವಾಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ