Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀರಿನ ಸದ್ಬಳಕೆಗೆ ನಿಗಾವಹಿಸಲು ನೋಡಲ್ ಅಧಿಕಾರಿಗಳ ನೇಮಕ: ಜಿಲ್ಲಾಧಿಕಾರಿ ದಿವ್ಯ ಪ್ರಭು

Advertisement
ಧಾರವಾಡ: ಮಲಪ್ರಭಾ ಬಲದಂಡೆ ಕಾಲುವೆಯಡಿ ಬರುವ ಜಿಲ್ಲೆಯ ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕಿನ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು, ಮೇ 13ರಿಂದ ಮೇ 22ರವರೆಗೆ ನವಿಲುತೀರ್ಥ ಜಲಾಶಯದಿಂದ ನೀರನ್ನು ಮಲಪ್ರಭಾ ಬಲದಂಡೆ ಕಾಲುವೆ ಮುಖಾಂತರ ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ನೀರಿನ ಸದ್ಬಳಕೆಗೆ ನಿಗಾವಹಿಸಲು ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರ ಆದೇಶದನ್ವಯ ಜನ-ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಮತ್ತು ನರಗುಂದ ಹಾಗೂ ರೋಣ ತಾಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಮತ್ತು ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ನರಗುಂದ ಶಾಖಾ ಕಾಲುವೆಗೆ ಪ್ರತಿದಿನ 700 ಕ್ಯೂಸೆಕ್​ನಂತೆ 10 ದಿನಗಳವರೆಗೆ ಹಾಗೂ ಮಲಪ್ರಭಾ ಬಲದಂಡೆ ಕಾಲುವೆಗೆ ಪ್ರತಿದಿನ 900 ಕ್ಯೂಸೆಕ್​ನಂತೆ 10 ದಿನಗಳವರೆಗೆ, ಹೀಗೆ ಪ್ರತಿದಿನ ಒಟ್ಟು 1600 ಕ್ಯೂಸೆಕ್​​ನಂತೆ 10 ದಿನಗಳ ಅವಧಿಗೆ ಒಟ್ಟು 1.036 ಟಿಎಂಸಿ ನೀರನ್ನು ದಿನಾಂಕ 13-05-2025 ರಿಂದ 22-05-2025ರವರೆಗೆ ನವಿಲುತೀರ್ಥ ಜಲಾಶಯದಿಂದ ಬಿಡುಗಡೆಗೊಳಿಸಲು ಅಧೀಕ್ಷಕ ಅಭಿಯಂತರರು, ಕ.ನೀ.ನಿ.ನಿ ಎಂ.ಆರ್.ಬಿ.ಸಿ ಧಾರವಾಡ ಇವರಿಗೆ ಷರತ್ತಿಗೊಳಪಟ್ಟು ಆದೇಶಿಸಿದ್ದಾರೆ.

ಮಲಪ್ರಭಾ ಬಲದಂಡೆ ಕಾಲುವೆಗೆ ನೀರನ್ನು ಕೇವಲ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಿಕೊಳ್ಳುವ ಉದ್ದೇಶಕ್ಕಾಗಿ ಮಾತ್ರ ಬಿಡುಗಡೆ ಮಾಡಲಾಗಿದೆ. ಈ ಸಮಯದಲ್ಲಿ ಕಾಲುವೆಯ ಅಚ್ಚುಕಟ್ಟು ಪ್ರದೇಶದ ಸಾರ್ವಜನಿಕರು, ರೈತರು ಈ ನೀರನ್ನು ಕೃಷಿ ಹಾಗೂ ಇನ್ನಿತರೆ ಬೇರೆ ಯಾವುದೇ ಉದ್ದೇಶಕ್ಕೆ ಪಂಪ್ ಸೆಟ್‍ನಿಂದ ಅಥವಾ ಇನ್ನಿತರ ಉಪಕರಣಗಳಿಂದ ಬಳಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದ್ದರಿಂದ ಎಲ್ಲ ಸಾರ್ವಜನಿಕರು, ರೈತರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ವಿನಂತಿ ಮಾಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ