ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಕಾವೇರಿ ಜಲ ವಿವಾದದ ಕುರಿತು ಮುಂದಿನ ಕಾನೂನು ಹಾಗೂ ರಾಜಕೀಯ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಸ್ಟ್ 2 (ಭಾನುವಾರ) ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.
ಕಾವೇರಿ ಜಲ ವಿವಾದದ ಕುರಿತು ರಾಜ್ಯದ ಮುಂದಿನ ನಿಲುವು, ಕಾನೂನು ಹೋರಾಟ ಹಾಗೂ ರೈತರ ಹಿತಾಸಕ್ತಿಯನ್ನು ಕಾಪಾಡುವ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ 2ರಂದು ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಸಭೆಗೆ ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರು ಮತ್ತು ಶಾಸಕರಿಗೆ ಆಹ್ವಾನ ನೀಡಲಾಗಿದೆ.


