LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

2028ಕ್ಕೂ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿ : ಶಿವರಾಜ್ ತಂಗಡಗಿ 

Advertisement

ಕೊಪ್ಪಳ: 2028ಕ್ಕೂ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದ್ದಾರೆ.‌

2028ಕ್ಕೆ‌ ಪಕ್ಷದ ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿದ್ದೇವೆ ಎನ್ನುತ್ತಿದ್ದರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಕೊಪ್ಪಳದಲ್ಲಿ ಪ್ರತಿಕ್ರಿಯಿಸಿದ ಸಚಿವರು, ಸಹಜವಾಗಿ ಹಿರಿಯರು ತಮ್ಮ ಭಾವನೆ‌ ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ 2028ಕ್ಕೂ ಕೂಡ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದರು.‌

ಜಿಲ್ಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಮಂತ್ರಿ ಪದವಿಯ ಆಕಾಂಕ್ಷಿಯಾಗಿದ್ದರು. ಮುಂದಿನ ದಿನಗಳಲ್ಲಿ‌ ಹಿಟ್ನಾಳ್‌ ಅವರು ಸಚಿವರಾಗುತ್ತಾರೆ ಎಂಬ ವಿಶ್ವಾಸವಿದೆ. ನಮ್ಮಲ್ಲಿ‌ ಯಾವುದೇ ಮುನಿಸುಗಳಿಲ್ಲ. ಜಿಲ್ಲೆಯ ಶಾಸಕರೆಲ್ಲ ಒಟ್ಟಾಗಿದ್ದೇವೆ ಎಂದು ತಿಳಿಸಿದರು.

ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ. ದೇಶಕ್ಕೆ‌ ಮಾದರಿಯಾದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ‌-ಟಿಪ್ಪಣಿ ಮಾಡಿದ್ದ ಬಿಜೆಪಿಗರು, ತಮ್ಮ‌ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ನೇತೃತ್ವದ ಸರ್ಕಾರ ಆಡಳಿತದಲ್ಲಿರುವ ರಾಜ್ಯದಲ್ಲಿ ಜಾರಿಗೆ ತಂದಿದ್ದಾರೆ. ಬಿಜೆಪಿಯಲ್ಲಿ ಅಶೋಕ್‌‌ ಅವರನ್ನು ಕಂಡರೆ,‌ ಸುನೀಲ್ ಕುಮಾರ್ ಅವರಿಗೆ ಆಗಲ್ಲ, ಸುನೀಲ್‌ ಕಂಡರೆ ಸಿ.ಟಿ.ರವಿ ಅವರಿಗೆ ಆಗಲ್ಲ.‌ ತಮ್ಮ ಪಕ್ಷದಲ್ಲಿನ ಸಮಸ್ಯೆಗಳನ್ನು ಬಿಜೆಪಿಯವರು ಮೊದಲು ಬಗೆಹರಿಸಿಕೊಳ್ಳಲಿ ಎಂದು ಛೇಡಿಸಿದರು.‌

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಮದುವೆಯಲ್ಲಿ ಭಾಗಿಯಾದ ಡಿ.ಕೆ.ಶಿ ದಂಪತಿ, ಸುದೀಪ್ ಶ್ರೀ ಭಗಂಡೇಶ್ವರ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ದಂಪತಿ ಭೇಟಿ : ನಾಡಿನಲ್ಲಿ ಉತ್ತಮ ಮಳೆ ಬೆಳೆಗೆ ಪಾರ್ಥನೆ ಆರ್‌ಪಿಎಫ್ ಸಿಬ್ಬಂದಿ ಮೇಲೆ ರೇಜರ್ ಬ್ಲೇಡ್‌ನಿಂದ ಹಲ್ಲೆ : ನಟಿ ಅಂತರಾ ಬ್ಯಾನರ್ಜಿ ಅರೆಸ್ಟ್ ಆಗಷ್ಟ್ ೧೯ ರಿಂದ ಇಂಗ್ಲೆAಡ್-ಪಾಕಿಸ್ತಾನ್ ೩ ಟೆಸ್ಟ್ಗಳ ಸರಣಿ ಆರಂಭ೪-೦ ರಿಂದ ಸರಣಿ ಗೆದ್ದ ಅಪಘಾನಿಸ್ತಾನ್ಎರಡನೇ ದಿನವೂ ಮಳೆರಾಯನ ಕಾಟಬಾಂಗ್ಲಾ ತಂಡಕ್ಕೆ ಇದು ಐತಿಹಾಸಿಕ ಗೆಲುವುಎಸ್‌ಡಿಎಂ ಚಾಲಕನಿಗೆ ಪೊಲೀಸ್ ಕಾನ್‌ಸ್ಟೆಬಲ್‌ ನಿಂದ ಮಸಾಜ್ : ವಿಡಿಯೋ ವೈರಲ್ ಸರ್ಕಾರಿ ಪ್ರೌಢಶಾಲೆ ಮಕ್ಕಳ ಬಿಸಿಯೂಟಕ್ಕೆ ದಿನಕ್ಕೆ ₹10.17 ಖರ್ಚು : ಇಲ್ಲಿದೆ ಸಂಪೂರ್ಣ ಲೆಕ್ಕಆಸ್ತಿಗಾಗಿ ಮೃತ ತಂದೆಯ ಹೆಬ್ಬೆರಳಚ್ಚನ್ನು ಹಾಕಿಸಿಕೊಂಡ ಮಗ