ಬೆಂಗಳೂರು: 'ಕಾಂತಾರ' ಖ್ಯಾತಿಯ ಸ್ಯಾಂಡಲ್‌ವುಡ್ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ರಿಷಬ್ ಶೆಟ್ಟಿ, ಸಿಎಂ ದಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.
ಇತ್ತೀಚೆಗಷ್ಟೇ ರಾಜ್ಯ ಸರ್ಕಾರದ ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮದ ಅಧಿಕೃತ ಪ್ರಚಾರ ರಾಯಭಾರಿಯಾಗಿ ನೇಮಕಗೊಂಡಿದ್ದ 'ಕಾಂತಾರ' ಖ್ಯಾತಿಯ ರಿಷಬ್ ಶೆಟ್ಟಿ, ಆ ಭಾಗದ ಪ್ರವಾಸೋದ್ಯಮದ ಅಭಿವೃದ್ಧಿ ಹಾಗೂ ನೂತನ ನೀತಿಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು.


