Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡದ ವಿಚಾರದಲ್ಲಿ ರಾಜಿಯಾಗಲ್ಲ :ಡಿ.ಕೆ.ಶಿವಕುಮಾರ್

Advertisement
ಬೆಂಗಳೂರು :"ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ ವಿಚಾರದಲ್ಲಿ ರಾಜಿಯಾಗದೆ ಕೆಲಸ ಮಾಡುತ್ತಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧ ಆವರಣದಲ್ಲಿ ನಡೆದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು "ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಅವರ, ಬಸವಣ್ಣನವರ, ಕೆಂಪೇಗೌಡರು ಸೇರಿದಂತೆ ಅನೇಕ ನಾಯಕರ ಪ್ರತಿಮೆಗಳಿವೆ.

ಈ ಶಕ್ತಿ ಕೇಂದ್ರದಲ್ಲಿ ನಾಡ ದೇವಿ ಭುವನೇಶ್ವರಿ ತಾಯಿ ಪ್ರತಿಮೆ ಇರಬೇಕು. ಇಲ್ಲಿಗೆ ಭೇಟಿ ನೀಡುವವರು ದೇವಿಯ ಆಶೀರ್ವಾದ ಪಡೆದುಕೊಳ್ಳಬೇಕು ಎಂಬುದು ನಮ್ಮ ಆಶಯ. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿದ್ದು ಈ ನೆನಪಿಗಾಗಿ 25 ಅಡಿಯ ಕಂಚಿನ ಪ್ರತಿಮೆ ಸ್ಥಾಪಿಸಲಾಗುತ್ತಿದೆ" ಎಂದರು.

"ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ" ಎಂದು ಹೇಳಿದರು.

"ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ" ಎಂದು ಆಶಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ