Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿ ಸಾಲ ಮಾಡಿಲ್ಲವೇ : ಡಿ. ಕೆ ಶಿವಕುಮಾರ್

Advertisement
ವಣಗೆರೆ: 'ಅಗತ್ಯ ವಸ್ತುಗಳ ಬೆಲೆ ಏರಿಕೆಯ ಮೂಲಕ ಜನರ ಮೇಲೆ ಕೇಂದ್ರ ಸರ್ಕಾರ ಹೇರಿದ ಆರ್ಥಿಕ ಹೊರೆಯನ್ನು ಇಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸಾಲ ಮಾಡಿದೆ.

ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ಪ್ರಧಾನಿ ನರೇಂದ್ರ ಮೋದಿ ಸಾಲ ಮಾಡಿಲ್ಲವೇ' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು.

'ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಬೆಲೆ ಏರಿಕೆಯ ಬಿಸಿಯಿಂದ ಪಾರು ಮಾಡಲು ರಾಜ್ಯ ಸರ್ಕಾರ 'ಗ್ಯಾರಂಟಿ' ಯೋಜನೆಗಳ ಮೂಲಕ ಜನರ ಕೈಗೆ ಹಣ ಕೊಡುತ್ತಿದೆ.

ಜನರ ಬಗ್ಗೆ ನೈಜ ಕಾಳಜಿ ಹೊಂದಿದ್ದರೆ ಕೇಂದ್ರ ಸರ್ಕಾರ ಕೂಡ ಇಂತಹದೊಂದು ಯೋಜನೆ ರೂಪಿಸಲಿ. ಜನರ ಬ್ಯಾಂಕ್‌ ಖಾತೆಗಳಿಗೆ ತಿಂಗಳಿಗೆ ₹ 10,000 ಆರ್ಥಿಕ ನೆರವು ನೀಡಲಿ' ಎಂದರು.

'ಬಿಜೆಪಿ ಖಾಲಿ ಮಾತುಗಳ ಮೂಲಕ ಜನರನ್ನು ಮರಳು ಮಾಡುತ್ತಿದೆ. ಅಕ್ಕಿಗೆ ಅರಿಶಿನ ಬೆರೆಸಿ ಅಯೋಧ್ಯೆಯಿಂದ ತಂದಿರುವಂತೆ ಬಿಂಬಿಸಿಕೊಂಡಿದೆ.

ಅಕ್ಕಿ ಹಾಗೂ ಅರಿಶಿನ ಬೆರೆಸಿದ ವಿಡಿಯೊಗಳು ನಮ್ಮ ಬಳಿ ಇನ್ನೂ ಹಾಗೆ ಇವೆ. ಅಕ್ಷತೆಯನ್ನು ಮನೆ-ಮನೆಗೆ ತಲುಪಿಸಿದ ರೀತಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳು ಏಕೆ ಪೂರೈಸಬಾರದು?' ಎಂದು ಕುಟುಕಿದರು.

'ನನ್ನೊಬ್ಬನಿಂದ ಅಥವಾ ಸಿದ್ದರಾಮಯ್ಯ ಅವರೊಬ್ಬರಿಂದ ರಾಜ್ಯ ಸರ್ಕಾರ ನಡೆಯುತ್ತಿಲ್ಲ. ಇಬ್ಬರು ಒಟ್ಟಿಗೆ ಶ್ರಮಿಸಿ ಕಾಂಗ್ರೆಸ್‌ ಅಧಿಕಾರಕ್ಕೆ ತಂದಿದ್ದೇವೆ. ಉಪಚುನಾವಣೆಯಲ್ಲಿ ಕೂಡ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ.

ನಮ್ಮೊಂದಿಗೆ ಪಕ್ಷದ ಕಾರ್ಯಕರ್ತರು, ಶಾಸಕರು ಹಾಗೂ ಸಚಿವರೂ ಇದ್ದಾರೆ. ನಾವು ಜಾತಿ, ಧರ್ಮದ ಮೇಲೆ ರಾಜಕಾರಣ ಮಾಡುವುದಿಲ್ಲ. ನೀತಿಯ ಮೇಲೆ ರಾಜಕಾರಣ ಮಾಡುತ್ತೇವೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ