Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ 

Advertisement

ಬೆಂಗಳೂರು: ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ (Public places) ಪಾರಿವಾಳಗಳಿಗೆ (Pigeons) ಆಹಾರ ಹಾಕುವುದನ್ನು (food) ನಿಯಂತ್ರಿಸಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ, ಜನರಿಗೆ ತೊಂದರೆ ಅಥವಾ ಆರೋಗ್ಯ ಸಮಸ್ಯೆ ಉಂಟಾಗುವ ಪ್ರದೇಶಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಷೇಧಿಸುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ.

ಪಾರಿವಾಳಗಳ ಮಲ ಹಾಗೂ ಗರಿಗಳಿಂದ ಉಸಿರಾಟ ಸಂಬಂಧಿತ ಕಾಯಿಲೆಗಳು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಅಗತ್ಯವಿದ್ದರೆ ಮಾನ್ಯತೆ ಪಡೆದ ಸ್ವಯಂಸೇವಾ ಸಂಸ್ಥೆಗಳ ಮೇಲ್ವಿಚಾರಣೆಯಲ್ಲಿ ಮಾತ್ರ ನಿಗದಿತ ಸ್ಥಳಗಳಲ್ಲಿ ಮತ್ತು ನಿಗದಿತ ಸಮಯದಲ್ಲಿ ಆಹಾರ ನೀಡಲು ಅವಕಾಶ ಕಲ್ಪಿಸಬಹುದು ಎಂದು ಸರ್ಕಾರ ತಿಳಿಸಿದೆ. 

ನಿಯಮ ಉಲ್ಲಂಘಿಸಿದವರ ವಿರುದ್ಧ ಸ್ಥಳದಲ್ಲೇ ಎಚ್ಚರಿಕೆ, ದಂಡ ಹಾಗೂ ಅಗತ್ಯವಿದ್ದರೆ ಭಾರತೀಯ ನ್ಯಾಯ ಸಂಹಿತೆಯಡಿ ಕಾನೂನು ಕ್ರಮ ಜರುಗಿಸಲು ಸೂಚಿಸಲಾಗಿದೆ.

ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರಿದಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಮಾರ್ಗಸೂಚಿ ಜಾರಿಗೊಳಿಸಬೇಕು ಎಂದು ಆರೋಗ್ಯ ಇಲಾಖೆ ನಿರ್ದೇಶಿಸಿದೆ. 

ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಇದರ ಅನುಷ್ಠಾನ ಕುರಿತು ಮುಂದಿನ ದಿನಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆಗೃಹಲಕ್ಷ್ಮಿ ದಿನಾಚರಣೆ : ಸಿಹಿ ಹಂಚಿ ಸಂಭ್ರಮಿಸಿದ  ಮಹಿಳೆಯರು