ಕೋಲಾರ : ಕೆಲ ವಿಶ್ವವಿದ್ಯಾಲಯಗಳು ಘೋಷಣೆ ಮಾಡಿದ್ದ ಡಾಕ್ಟರೇಟ್ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಅಕ್ಟೋಬರ್ 19) ದೇವರಾಜ ಅರಸು ಮೆಡಿಕಲ್ ಕಾಲೇಜಿನಿಂದ ನೀಡಿದ ಗೌರವ ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದಾರೆ.
ಒಂದು ವರ್ಷದ ಹಿಂದೆಯೇ ಸಿದ್ದರಾಮಯ್ಯನವರಿಗೆ ಡಾಕ್ಟರೇಟ್ ಘೋಷಣೆ ಮಾಡಲಾಗಿತ್ತು. ಆದ್ರೆ, ಸ್ವೀಕರಿಸಲು ಸಿದ್ದರಾಮಯ್ಯ ನಿರಾಕರಿಸಿದ್ದರು.
ಆದೆ, ಅನಿವಾರ್ಯವಾಗಿ ಎಲ್ಲರ ಒತ್ತಾಯದ ಮೇರೆಗೆ ಇಂದು (ಅಕ್ಟೋಬರ್ 19) ನಡೆದ R.L.ಜಾಲಪ್ಪ ಆಸ್ಪತ್ರೆ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ದೇವರಾಜ ಅರಸು ಮೆಡಿಕಲ್ ಕಾಲೇಜಿನಿಂದ ನೀಡಿದ ಗೌರವ ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದಾರೆ. ಆದ್ರೆ, ಡಾಕ್ಟರ್ ಸಿದ್ದರಾಮಯ್ಯ ಎಂದು ಕರೆಯಬೇಡಿ ಎಂದಿದ್ದಾರೆ.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾನು ಡಾಕ್ಟರೇಟ್ ಬೇಡ ಅಂತ ಹೇಳಿದ್ದೆ.ಸ್ವೀಕಾರ ಮಾಡೋದಾ ಬೇಡ್ವಾ ಅಂತ ಇದ್ದೆ. ಆದ್ರೂ ನನಗೆ RL ಜಾಲಪ್ಪ ಕಾಲೇಜಿನವರು ಗೌರವ ಡಾಕ್ಟರೇಟ್ ನೀಡಿದ್ದಾರೆ.
RL ಜಾಲಪ್ಪ ಕಾಲೇಜಿನವರಿಗೆ ಧನ್ಯವಾದಗಳು. ಆದ್ರೆ ನನಗೆ ಸಿದ್ದರಾಮಯ್ಯ ಅಂತಾನೆ ಕರೆಯಿರಿ. ಡಾ.ಸಿದ್ದರಾಮಯ್ಯ ಅಂತಾ ಕರೆಯಬೇಡಿ ಎಂದು ನಗೆ ಚಟಾಕಿ ಹಾರಿಸಿದರು.


