LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸಿದ್ದರಾಮಯ್ಯ ಅವರೇ ನಿಮ್ಮ ರಕ್ತ ಕುದಿಯುತ್ತಿಲ್ವಾ?: ಕುಮಾರಸ್ವಾಮಿ ಪ್ರಶ್ನೆ 

Advertisement

ಬೆಂಗಳೂರು: ಅತ್ಯಂತ ಅಪಮಾನಕರವಾಗಿ ಅಧಿಕಾರದಿಂದ ಕೆಳಗಿಳಿದ ಸಿದ್ದರಾಮಯ್ಯನವರಿಗೆ ತಮ್ಮ ವಿರುದ್ಧ ನಡೆದಿರುವ ಸಂಚಿನ ಬಗ್ಗೆ ರಕ್ತ ಕುದಿಯುತ್ತಿಲ್ಲವೇ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಬ್ಲಾಕ್ಮೇಲ್ ಪತ್ರಕರ್ತ ರಾಕೇಶ್ ಶೆಟ್ಟಿ ಮತ್ತು ಆತನ ಸಂಗಡಿಗರನ್ನು ಬಂಧಿಸಲು ಒತ್ತಾಯಿಸಿ ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರ ಕಚೇರಿ ಆವರಣದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು..

ನನಗೆ ಬಹಳ ಆಶ್ಚರ್ಯವಾಗುತ್ತಿದೆ. ಸಿದ್ದರಾಮಯ್ಯನವರು ಮೌನದಿಂದ ಇರುವ ವ್ಯಕ್ತಿಯಲ್ಲ. ತಮ್ಮ ವಿರುದ್ಧ ಅನ್ಯಾಯ ನಡೆದರೆ ಸಹಿಸುವ ಜಾಯಮಾನದವರಲ್ಲ. ತಮ್ಮ ವಿರುದ್ಧ ರಾಜ್ಯದ ಈಗಿನ ಮುಖ್ಯಮಂತ್ರಿ ಮತ್ತು ಕಿಡಿಗೇಡಿ ರಾಕೇಶ್ ಶೆಟ್ಟಿ ಸೇರಿ ನಡೆಸಿದ ಸಂಚಿನ ಕುರಿತಂತೆ ಅವರು ಮೌನ ವಹಿಸಿರುವುದು ನನಗೆ ನೋವು ತಂದಿದೆ ಎಂದು ಸಚಿವರು ಹೇಳಿದರು.

ಈ ವಿಷಯವನ್ನು ನಾನು ಇಲ್ಲಿಗೆ ಬಿಡುವ ಪ್ರಶ್ನೆ ಇಲ್ಲ. ಈಗಾಗಲೇ ಪೊಲೀಸ್ ಆಯುಕ್ತರಿಗೆ, ಇಂದು ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದೇವೆ. ಇದರ ಮೇಲೆ ಪೊಲೀಸರು ಕ್ರಮ ಜರುಗಿಸದೆ ಇದ್ದರೆ ಮುಂದೆ ಏನು ಮಾಡಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ. ಸ್ಟಿಂಗ್ ಮಾಡಿದ ಕಿರಾತಕರನ್ನು ಬಂಧಿಸದ ಹೊರತು ನಾವು ವಿಶ್ರಮಿಸುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಪೊಲೀಸ್ ಮಹಾನಿರ್ದೇಶಕರಿಗೆ ಸುದೀರ್ಘ ದೂರನ್ನು ಕೊಟ್ಟಿದ್ದೇವೆ. ರಾಕೇಶ್ ಶೆಟ್ಟಿ ಮತ್ತು ಆತನ ಸಹಚರರು ನಡೆಸಿರುವ ಅಕ್ರಮಗಳು, ರಹಸ್ಯ ಕಾರ್ಯಾಚರಣೆ ಹೆಸರಿನಲ್ಲಿ ಮಾಡಿರುವ ಹಣ ವಸೂಲಿ ರಾಜಕಾರಣಿಗಳು, ಪೊಲೀಸರು ಮತ್ತು ಸರ್ಕಾರದ ಅಧಿಕಾರಿಗಳನ್ನು ಹೆದರಿಸಿ ಬೆದರಿಸಿ ಬ್ಲಾಕ್ ಮೇಲ್ ಮಾಡಿರುವ ಎಲ್ಲಾ ಅಂಶಗಳನ್ನು ಅವರಿಗೆ ಮನವರಿಕೆ ಮಾಡಿದ್ದೇವೆ.

ಅವನ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಳ್ಳದೆ ಇದ್ದರೆ ವಿಜಯದಶಮಿ ನಂತರ ಸ್ವತಃ ನಾನೇ ಮತ್ತೊಮ್ಮೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಸಚಿವರು ನೇರ ಎಚ್ಚರಿಕೆ ನೀಡಿದರು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲಿಗೆ ಬಿದ್ದು ಪ್ರಾರ್ಥಿಸ್ತೇನೆ ಹೋರಾಟ ಕೈಬಿಡಿ : ಕಬ್ಬು ಬೆಳೆಗಾರರ ಹೋರಾಟಗಾರರಿಗೆ ಸಿಎಂ ಮನವಿ 5-10 ಓವರ್ ಗಳ ಪಂದ್ಯವೂ ಗ್ಯಾರಂಟಿ ಇಲ್ಲದಂತಾಗಿದೆ ಸಿದ್ದರಾಮಯ್ಯ ಅವರೇ ನಿಮ್ಮ ರಕ್ತ ಕುದಿಯುತ್ತಿಲ್ವಾ?: ಕುಮಾರಸ್ವಾಮಿ ಪ್ರಶ್ನೆ ಪ್ರಿಯಾಂಕ್ ಖರ್ಗೆ ಕೇವಲ 'ಸೋಷಿಯಲ್ ಮೀಡಿಯಾ ಮಂತ್ರಿ': ಶ್ರೀರಾಮುಲುನಿರಂತರ ಮಳೆಯಿಂದ ಭಾರತ- ವೆಸ್ಟ್ ಇಂಡೀಸ್ ಪಂದ್ಯದ ಟಾಸ್ ವಿಳಂಭಶವಾಗಾರದಲ್ಲಿ ಆಲ್ಕೋಹಾಲ್ ಪಾರ್ಟಿ ಮಾಡಿದ ವೈದ್ಯ : ಅಮಾನತು ಶಿಕ್ಷೆ ಸಿಜೆಪಿ ಪ್ರತಿಭಟನೆಗೂ.. ಕಾಂಗ್ರೆಸ್​​​ಗೂ ಸಂಬಂಧವಿಲ್ಲ : ಸತೀಶ್ ಜಾರಕಿಹೊಳಿದಿಢೀರ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಕ್ಕೆ ಸೌಮ್ಯರೆಡ್ಡಿ ರಾಜೀನಾಮೆ ಇಂಚಲ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆಕಬ್ಬು ಬೆಳೆಗಾರರ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆ : ಹೈಕೋರ್ಟ್ ಮಧ್ಯಪ್ರವೇಶ