Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Advertisement
ಬೆಳಗಾವಿ : ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು. ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ (ಮಾ.17) ನಡೆದ ಭಾರತ ರತ್ನ ಡಾ.ಬಿ. ಆರ್ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜ್ಯೋತಿಯನ್ನು ಬೆಳಿಗ್ಗೆ 10 ಗಂಟೆಗೆ ಬರಮಾಡಿಕೊಂಡು ಅಂಬೇಡ್ಕರ್ ಉದ್ಯಾನವನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ನೆರವೇರಿಸಲಾಗುವುದು ಎಂದು ಹೇಳಿದರು.


ನಗರದ ಧರ್ಮವೀರ ಸಂಭಾಜಿ ವೃತ್ತದಿಂದ ಮೆರವಣಿಗೆ ನಡೆಯಲಿದೆ ಬಳಿಕ ಸಂಜೆ 4 ಗಂಟೆಗೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಮುಖ್ಯ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗುವುದು.

ಕಾರ್ಯಕ್ರಮಕ್ಕೆ ಅಗತ್ಯವಿರುವ ಪೆಂಡಾಲ್, ಕಟೌಟ್, ಆಸನ ವ್ಯವಸ್ಥೆ, ಉದ್ಯಾನವನ ಸ್ವಚ್ಛಗೊಳಿಸುವುದು. ನಗರದ ಪ್ರಮುಖ ವೃತ್ತಗಳಲ್ಲಿ ಬ್ಯಾನರ್, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಹಾನಗರ ಪಾಲಿಕೆಯಿಂದ ಕಲ್ಪಿಸಬೇಕು ಎಂದು ಸೂಚಿಸಿದರು.

ರೂಪಕ ವಾಹನಗಳು ಮೆರವಣಿಗೆ: ರೂಪಕ ವಾಹನಗಳ ಮೆರವಣಿಗೆ ಧರ್ಮವೀರ ಸಂಭಾಜಿ ವೃತ್ತದಿಂದ ಕಿರ್ಲೋಸ್ಕರ್ ರೋಡ್, ರಾಮದೇವ್ ಗಲ್ಲಿ, ಖಡೆಬಜಾರ್, ಶನಿವಾರ ಕೂಟ, ಕಾಕತಿವೇಸ್, ಚನ್ನಮ್ಮ ವೃತ್ತದ ಮಾರ್ಗವಾಗಿ ಅಂಬೇಡ್ಕರ್ ಉದ್ಯಾನವನದ ವರೆಗೆ ತಲುಪಲಿದೆ. ಸಮಾಜದ ಮುಖಂಡರ ಸಲಹೆಯಂತೆ ಅಂಬೇಡ್ಕರ್ ಅವರ ಕುರಿತು ಅಧ್ಯಯನ ಕೈಗೊಂಡಿರುವ ಸಂಪನ್ಮೂಲ ವ್ಯಕ್ತಿಗಳನ್ನು ಉಪನ್ಯಾಸಕ್ಕೆ ಆಹ್ವಾನಿಸಬೇಕು ಎಂದರು.

ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದ ಪ್ರಕಾರ ಮುದ್ರಿಸಿ, ಮುಂಚಿತವಾಗಿಯೇ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಸ್ಥಳೀಯ ಕಲಾ ತಂಡಗಳನ್ನು ಆಹ್ವಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ಅಂಬೇಡ್ಕರ್ ವಿಚಾರ ಸಂಕೀರ್ಣ; ಅಗತ್ಯ ಸೌಲಭ್ಯ ಕಲ್ಪಿಸಲು ವಿನಂತಿ: ಇದೇ ವೇಳೆ ಸಮಾಜದ ಮುಖಂಡರಾದ ಮಲ್ಲೇಶ ಚೌಗಲಾ ಮಾತನಾಡಿ, ನಿಗದಿತ ಸಮಯದೊಳಗೆ ಮೆರವಣಿಗೆ, ವೇದಿಕೆ ಕಾರ್ಯಕ್ರಮ ನಡೆಯಬೇಕು. ಏಪ್ರಿಲ್ ಮೊದಲ ವಾರದಿಂದ ಶಾಲಾ ಮಕ್ಕಳಿಗೆ ರಜೆ ಇರುವ ಕಾರಣ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಮುಂಚಿತವಾಗಿಯೇ ವಿಚಾರ ಸಂಕೀರ್ಣ ನಡೆಸಬೇಕು ಎಂದು ಹೇಳಿದರು.

ಜಯಂತಿ ಆಚರಣೆ ವೇಳೆ ಮುಂಜಾಗೃತಾ ಕ್ರಮವಾಗಿ ಅಂಬ್ಯುಲೆನ್ಸ್, ಕುಡಿಯುವ ನೀರು, ಮೊಬೈಲ್ ಟಾಯ್ಲೆಟ್ ಸೌಲಭ್ಯ ಕಲ್ಪಿಸಬೇಕು. ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚು ಜನರು ಆಗಮಿಸುವ ಸಾದ್ಯತೆ ಇರುವ ಕಾರಣ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಬೇಕು ಎಂದರು.

ಮೆರವಣಿಗೆ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಟ್ರಾಫಿಕ್ ಸಮಸ್ಯೆ ಇರುವ ಕಾರಣ ಅಗತ್ಯ ಸ್ಥಳಗಳಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಬೇಕು. ಜಯಂತಿ ಆಗಮಿಸುವ ಅಂಬೇಡ್ಕರ್ ಅನುಯಾಯಿಗಳಿಗೆ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಮಲ್ಲೇಶ ಚೌಗಲಾ ವಿನಂತಿಸಿದರು.

ಕಂಗ್ರಾಳಿ ಗ್ರಾಮದ ಮಹಿಳೆಯೊಬ್ಬರು ಮಾತನಾಡಿ, ಸಂವಿಧಾನ ಮತ್ತು ಅಂಬೇಡ್ಕರ್ ಸಂದೇಶಗಳ ಫಲಕಗಳನ್ನು ಪ್ರತಿ ಪ್ರಮುಖ ವೃತ್ತಗಳಲ್ಲಿ ಅಳವಡಿಸಬೇಕು ಎಂದು ಮನವಿ ಮಾಡಿದರು. ಮತ್ತೋರ್ವ ಮುಖಂಡರಾದ ದುರ್ಗೇಶ್ ಮೇತ್ರಿ ಮಾತನಾಡಿ, ಮೆರವಣಿಗೆಗೆ ಪ್ರತಿ ಹಳ್ಳಿಯಿಂದ ರೂಪಕ ವಾಹನಗಳು ಬರುವ ಸಂದರ್ಭದಲ್ಲಿ ಗ್ರಾಮಿಣ ಭಾಗದ ಪೊಲೀಸರು ಜನರನ್ನು ವಾಪಸ್ ಹಳುಹಿಸುತ್ತಿರುವ ಪ್ರಕರಣಗಳು ಕಳೆದ ವರ್ಷ ಕಂಡು ಬಂದಿವೆ. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳು ಗ್ರಾಮೀಣ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಪ್ರತಿ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಡ್ಡಾಯವಾಗಿ ಪೂಜೆ ಸಲ್ಲಿಸಬೇಕು; ಶಾಲಾ- ಕಾಲೇಜುಗಳು ರಜೆ ಕಾರಣ ಏಪ್ರಿಲ್ 14 ರಂದು ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಣೆಗೆ ಆದೇಶ ಹೊರಡಿಸಬೇಕು ಎಂದು ಮುಖಂಡರು ಸಭೆಯಲ್ಲಿ ವಿನಂತಿಸಿದರು.

ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ ನಾಮ ನಿರ್ದೇಶಿತ ಸದಸ್ಯರಾದ ಕರೆಪ್ಪ ಗುಡೇನ್ನವರ ಮಾತನಾಡಿ, ಜಿಲ್ಲೆಯ ವಸತಿ ಶಾಲೆಗಳಿಗೆ ಅಂಬೇಡ್ಕರ್ ಹೆಸರು ಮರು ನಾಮಕರಣ ಮಾಡಬೇಕು ಎಂಬ ಆದೇಶ ಸರ್ಕಾರ ಈಗಾಗಲೇ ಹೊರಡಿಸಿದೆ ಇದೊಂದು ಮಹತ್ತರ ಬೆಳವಣಿಗೆ ಹಾಗಾಗಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಪ್ರತಿ ವರ್ಷದಂತೆ ಜಯಂತಿ ದಿನದಂದು ಮದ್ಯಪಾನ ನಿಷೇಧಿಸಲಾಗುವುದು. ಶಿಕ್ಷಣ ಇಲಾಖೆಯಿಂದ ಮಾಹಿತಿ ಪಡೆದು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದರು.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಪುಸ್ತಕ ಪ್ರೇಮಿಗಳು ಅವರ ವಿಚಾರ ಚಿಂತನೆಯಂತೆ ಅಂಬೇಡ್ಕರ್ ಅವರ ಲೇಖನಗಳು, ಜೀವನ ಚರಿತ್ರೆ ಬಗ್ಗೆ ಪುಸ್ತಕ ಮಳಿಗೆಗಳನ್ನು ಸ್ಥಾಪಿಸುವಂತೆ ಯುವ ಮುಖಂಡ ವಿವೇಕ ಕರ್ಪೆ ವಿನಂತಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮೊಹಮ್ಮ ರೋಷನ್ ಅವರು ಪುಸ್ತಕ ಮಳಿಗೆಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗ್ರಂಥಾಲಯ ಇಲಾಖೆ ಇವರಿಂದ ಸ್ಥಾಪಿಸುವಂತೆ ಸೂಚಿಸಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರು ಮಾತನಾಡಿ, ಪ್ರತಿ ವರ್ಷದಂತೆ ಅಂಬೇಡ್ಕರ್ ಜಯಂತಿ ಆಚರಣೆಗೆ ಅಗತ್ಯ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

ಪ್ರತಿ ಗ್ರಾಮ ಪಂಚಾಯತಿ ಹಾಗೂ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಡ್ಡಾಯವಾಗಿ ಆಚರಣೆಗೆ ಆದೇಶವಿದೆ. ಯಾವುದೇ ಲೋಪದೋಷಗಳು ಆಗದಂತೆ ಅಚ್ಚುಕಟ್ಟಾಗಿ ಜಯಂತಿ ಆಚರಣೆಗೆ ಮಾಡಲು ಜಿಲ್ಲಾ ಪಂಚಾಯತ್ ವತಿಯಿಂದ ಸೂಚನೆ ನೀಡಲಾಗುವುದು ಎಂದು ಜಿ.ಪಂ ಸಿಇಒ ರಾಹುಲ್ ಶಿಂಧೆ ಅವರು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತರಾದ ಶುಭ. ಬಿ, ಎಸಿಪಿ ಸದಾಶಿವ ಕಟ್ಟಿಮನಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ. ರಾಜೀವ ಕೂಲೇರ್ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರಾದ ಭಾವಕಣ್ಣ ಭಂಗ್ಯಾಗೋಳ (ನಾಯಕ), ಮಹೇಶ್ ಶಿಗಿಹಳ್ಳಿ, ಲಕ್ಷಣ ಕೋಲಕಾರ, ಪ್ರವೀಣ್ ಚಲವಾದಿ ಮತ್ತಿತರ ಮುಖಂಡರು ಹಾಗೂ ಸಮಾಜದ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ