LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ 

Advertisement

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಬಿಜೆಪಿ ಹಿರಿಯ ನಾಯಕಿ ಡಾ. ಸುಧಾ ಯಾದವ್ ಅವರು (ಅಕ್ಟೋಬರ್ 16) ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಲೋಕಭವನದ ಗಾಜಿನಮನೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಮಾಣವಚನ ಸಮಾರಂಭ ನಡೆದಿದ್ದು, ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.

ಬೆಂಗಳೂರಿನ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ನೂತನ ರಾಜ್ಯಪಾಲರಿಗೆ ಪ್ರಮಾಣವಚನ ಬೋಧಿಸಿದರು. ಇದರೊಂದಿಗೆ ಸುಧಾ ಯಾದವ್ ಅವರು ರಾಜ್ಯದ 20ನೇ ರಾಜ್ಯಪಾಲರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲೆ

ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡಿರುವ ಡಾ. ಸುಧಾ ಯಾದವ್ ಅವರು ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ವಿ.ಎಸ್. ರಮಾದೇವಿ ಅವರು 1999ರಿಂದ 2002ರವರೆಗೆ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಕ್ಟೋಬರ್ 12ರಂದು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿದ್ದರು. ಅದರಂತೆ, ಥಾವರ್ ಚಂದ್ ಗೆಹ್ಲೋಟ್ ಅವರ ಸ್ಥಾನಕ್ಕೆ ಸುಧಾ ಯಾದವ್ ಅವರನ್ನು ನೇಮಿಸಲಾಗಿತ್ತು.

ಪ್ರಮಾಣವಚನಕ್ಕೂ ಮುನ್ನ ಹುತಾತ್ಮ ಯೋಧರಿಗೆ ನಮನ

ಪ್ರಮಾಣವಚನ ಸ್ವೀಕರಿಸುವುದಕ್ಕೂ ಮುನ್ನ ಸುಧಾ ಯಾದವ್ ಅವರು ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
,ಸೂರ್ಯವಂಸಿ ಗೆ ಸ್ಥಾನ ಸಿಗುವುದಾದರೇ ಓಪನ್ ರ ಆಗಿ ಮಾತ್ರ ಉತ್ತಮ,ಸರ್ಕಾರಿ ನೌಕರಿ 10-15 ವರ್ಷಕ್ಕೆ ಲಿಮಿಟ್‌ ಮಾಡಿದ್ರೆ ಹೇಗೆ? : ಕುಮಾರಸ್ವಾಮಿ ಬೆಳಗಾವಿಯಲ್ಲಿ ಕೆಫೆಗೆ ನುಗ್ಗಿ ಯುವಕನ ಮೇಲೆ ಮಚ್ಚು ತಲ್ವಾರ್​​​​​​ನಿಂದ ದಾಳಿ ಪಿ. ವಿ. ಸಿಂಧು ಕ್ವಾರ್ಟರ್ ಪೈನಲ್ ಗೆ ಮುಂದುವರೆದ ಕಬ್ಬು ಬೆಳೆಗಾರ ಪ್ರತಿಭಟನೆ : ಪಾದಯಾತ್ರೆ ಮೂಲಕ ಸರ್ಕಾರಕ್ಕೆ ಛಾಟಿ75 ವರ್ಷದ ವೃದ್ದನೊಂದಿಗೆ ಲವ್ : ನಿಶ್ಚಿತಾರ್ಥ ಮಾಡಿಕೊಂಡ 30ರ ಯುವತಿಟೀಮ್ ಇಂಡಿಯಾ ಸೇರಿದ ಭುವನೇಶ್ವರ ಕುಮಾರ್ ಕಾರ್ಮಿಕನ ಮೇಲೆ ಹಲ್ಲೆ : ಕ್ರಷರ್ ಮಾಲೀಕನ ವಿರುದ್ಧ ಕ್ರಮಕ್ಕೆ ಕೃಷ್ಣಮೂರ್ತಿ ಒತ್ತಾಯಸ್ಮೃತಿ ಮಂದನಾ ನೇತೃತ್ವದಲ್ಲಿ ಇಂದು ಭಾರತಕ್ಕೆ ಮೊದಲ ಪಂದ್ಯ ಕರ್ನಾಟಕ ಹನಿ ಟ್ರಾಪ್' ಹೆಸರಿನಲ್ಲಿ ಹೊಸ ಯೂಟ್ಯೂಬ್ ಚಾನೆಲ್ : ರಾಜ್ಯದಲ್ಲಿ ಸಂಚಲನ