Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ವಿರೇಂದ್ರ ಹೆಗಡೆಯವರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಶೀತಲ ಪಾಟೀಲ

Advertisement
ಕಾಗವಾಡ : ಪೂಜ್ಯ ಡಾ .ವಿರೇಂದ್ರ ಹೆಗಡೆ ಧರ್ಮಸ್ಥಳ ಸಂಸ್ಥೆಯ ಮೂಲಕ ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಆಗುತ್ತಿರುವ ಸರ್ವಾಂಗೀಣ ಅಭಿವೃದ್ಧಿ, ಸಮಾಜದಲ್ಲಿ ಬಡತನ ನಿರ್ಮೂಲನೆ ಆಗಿ ಅರ್ಥಿಕ ಅಭಿವೃದ್ಧಿ ಹೊಂದಲು ಕೈಗೊಂಡ ಯೋಜನೆಗಳ ಬಗ್ಗೆ ಶ್ಲಾಘನೀಯ ಕಾರ್ಯ ಎಂದು ಜೈನ್ ಅಸೋಸಿಯೇಷನ್ ಉಪಾಧ್ಯಕ್ಷ ರಾದ ಶೀತಲ ಪಾಟೀಲ‌ ಹೇಳಿದರು.

ಕಾಗವಾಡ ಪಟ್ಟಣದ ವಿದ್ಯಾಸಾಗರ ಶಾಲೆಯ ಸಭಾಂಗಣದಲ್ಲಿ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ 160 ವಿದ್ಯಾರ್ಥಿಗಳಿಗೆ 75ಲಕ್ಷ ಮೊತ್ತದ ಸುಜ್ಞಾನನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರವನ್ನು ವಿತರಿಸಿ ಮಾತನಾಡಿದ ಅವರು ಮಕ್ಕಳು ಸಹ ಉನ್ನತ ಶಿಕ್ಷಣ ಪಡೆಯಬೇಕು ಅನ್ನುವ ದೃಷ್ಟಿಕೋನದಿಂದ ಪ್ರತಿವರ್ಷ ಸಾವಿರಾರು ಕೋಟಿ ಶಿಷ್ಯ ವೇತನ ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ನೀಡುತ್ತಿದ್ದಾರೆ, ಶಿಷ್ಯ ವೇತನ ಮಂಜೂರಾತಿ ಆಗಿರುವ ಮಕ್ಕಳು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದರು.

ಇನ್ನು ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೆಶಕರಾದ ಶ್ರೀಮತಿ ನಾಗರತ್ನಾ ಹೆಗಡೆ ಮಹಿಳೆಯರು ಸ್ವಾವಲಂಬನೆಯ ಜೀವನ ನಡೆಸುವಲ್ಲಿ ಸಂಘದ ಮಹತ್ವದ ಬಗ್ಗೆ ಮಾಹಿತಿ ಹಾಗೂ ಸುಜ್ಞಾನನಿಧಿ ಶಿಷ್ಯ ವೇತನ ಪಡೆದುಕೊಳ್ಳುವ ಮಕ್ಕಳು ತಮ್ಮ ಶಿಕ್ಷಣಕ್ಕೆ ಪೂರಕವಾಗಿ ಹಣವನ್ನು ಬಳಸಿಕೊಳ್ಳಬೇಕು ಜೊತೆಗೆ ವಿದ್ಯಾರ್ಥಿಗಳಿಗಳು ಮುಂದಿನ ಜೀವನ ಉಜ್ವಲವಾಗಲಿ ಎಂದರು.

ಈ ಸಮಯದಲ್ಲಿ ಉಪತಹಶೀಲ್ದಾರ ಶ್ರೀಮತಿ ರಶ್ಮೀ ಜಕಾತಿ, ಬಿಇಓ ಪಿ ಬಿ ಮದಭಾವಿ, ಗಣ್ಯರಾದ ನ್ಯಾತಗೌಡ ಪಾಟೀಲ,ಪಿಕೆಪಿಎಸ್ ಅಧ್ಯಕ್ಷರಾದ ಸ್ವಪ್ನೀಲ ಪಾಟೀಲ, ಐನಾಪುರ ಪಟ್ಟಣ ಪಂಚಾಯತ ಸದಸ್ಯರಾದ
ಅರುಣ ಗಾಣಿಗೇರ,ವಿದ್ಯಾಸಾಗರ ಶಿಕ್ಷಣ ಸಂಸ್ಥೆ ಪದ್ಮಾಕರ ಕರವ,ಭಮ್ಮಣ್ಣ ಚೌಗಲಾ, ಖಂಡೇರಾವ ಗೋರ್ಪಡೆ,ವಿಠ್ಠಲ ಹಳ್ಳೊಳ್ಳಿ,ಕಾಗವಾಡ ಕ್ಷೇತ್ರ ಯೋಜನಾದಿಕಾರಿಗಳಾದ ಸಂಜೀವ ಮರಾಠಿ,ಕಾಗವಾಡ ವಲಯ ಮೇಲ್ವಿಚಾರಕರು, ಕೃಷಿ ಮೇಲ್ವಿಚಾರಕರು, ಕಾಗವಾಡ ವಲಯ ಸೇವಾಪ್ರತಿನಿಧಿಗಳು ವಿದ್ಯಾರ್ಥಿಗಳು ಪಾಲಕರು ಉಪಸ್ಥಿತರಿದ್ದರು.

ವರದಿ :  ಚಂದ್ರಕಾಂತ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ