Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಂಚೋಳಿ ವನ್ಯಜೀವಿ ಧಾಮದಲ್ಲಿ ಜೀಪ್ ಸಫಾರಿ ಮತ್ತು ಬೋಟಿಂಗ್ ಗೆ ಚಾಲನೆ

Advertisement
----------------------------------------------------------------ಚಿಂಚೋಳಿ ಮಿನಿ ಪ್ರವಾಸಿ ಸರ್ಕ್ಯೂಟ್ ಮಾಡಲು ಕ್ರಮ: ಪ್ರಿಯಾಂಕ್ ಖರ್ಗೆ




ಚಿಂಚೋಳಿ: ಮಾ14ರಂದು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಂದ್ರಂಪಳ್ಳಿ ಜಲಾಶಯ, ಗೊಟ್ಟಂಗೊಟ್ಟ, ಎತ್ತಿಪೊತ್ತ ಜಲಪಾತ‌ ಸೇರಿದಂತೆ ದಟ್ಟ ಅರಣ್ಯದೊಂದಿಗೆ ವನ್ಯಜೀವಿ ತಾಣವಾಗಿರುವ ಜಿಲ್ಲೆಯ‌ ಚಿಂಚೋಳಿಯನ್ನು ಮುಂದಿನ ಒಂದೂವರೆ ವರ್ಷದಲ್ಲಿ ಮಿನಿ ಪ್ರವಾಸಿ ಸರ್ಕ್ಯೂಟ್ ಮಾಡಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶನಿವಾರ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿಯಲ್ಲಿ ಅರಣ್ಯ ಜೀಪ್ ಸಫಾರಿ ಹಾಗೂ‌ ಚಂದ್ರಂಪಳ್ಳಿ ಜಲಾಶಯದಲ್ಲಿ ದೋಣಿ‌ ವಿಹಾರ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿಂಚೋಳಿ ಸುತ್ತಮುತ್ತವಿರುವ 8-10 ಪ್ರವಾಸಿ ತಾಣಗಳನ್ನು ಸರ್ಕ್ಯೂಟ್ ನಲ್ಲಿ ಸೆರಿಸಲಾಗುವುದು. ಪ್ರವಾಸಿಗರು ಒಂದು ದಿನದ ಪ್ಯಾಕೇಜ್ ನಡಿ ಇದನೆಲ್ಲ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುಸು. ಕೆ.ಎಸ್.ಟಿ‌.ಡಿ.ಸಿ. ಯಿಂದ ಪ್ಯಾಕೇಜ್ ಟೂರ್ ವ್ಯವಸ್ಥೆ ಸಹ ಜಾರಿಗೆ ತರಲಾಗುವುದು ಎಂದರು.
ಚಿಂಚೋಳಿ ಸುತ್ತಮುತ್ತ ಪ್ರಾಕೃತಿಕ ತಾಣಗಳ ಸೌಂದರ್ಯ ಸವೆಯಲು ಪ್ರವಾಸಿಗರಿಗೆ ಪೂರಕವಾಗಿ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೆ ತೋಟಗಾರಿಕೆ ಇಲಾಖೆಯಿಂದ 6.50 ಕೋಟಿ ರೂ. ಮೊತ್ತದ ಡಿ.ಪಿ.ಅರ್. ಸಿದ್ದಪಡಿಸಲಾಗಿದೆ. ಪ್ರವಾಸೋದ್ಯಮ, ಅರಣ್ಯ, ಕೃಷಿ, ತೋಟಗಾರಿಕೆ ಹೀಗೆ ಎಲ್ಲಾ ಇಲಾಖೆಯ ಸಮನ್ವಯದೊಂದಿಗೆ ಬ್ಲೂಪ್ರಿಂಟ್ ಸಿದ್ದಪಡಿಸಲಾಗುವುದು. ಇನ್ನು ಈ ನಿಟ್ಟಿನಲ್ಲಿ ಶೀಘ್ರವೇ ಪ್ರವಾಸೋದ್ಯಮ ಸಚಿವರನ್ನು ಸಹ ಭೇಟಿ ಮಾಡಿ ಚರ್ಚಿಸಲಾಗುವುದು ಎಂದರು‌.
ಅರಣ್ಯ ಜೀಪ್ ಸಫಾರಿಗೆ 24 ಲಕ್ಷ ವೆಚ್ಚದಲ್ಲಿ ಎರಡು ಕ್ಯಾಂಪರ್ ವಾಹನಗಳನ್ನು ಖರೀದಿಸಿ ಸಫಾರಿ ವಾಹನಗಳಾಗಿ ಮಾರ್ಪಡಿಸಲಾಗಿದೆ.‌ 64 ಲಕ್ಷ ರೂ. ವೆಚ್ಚದಲ್ಲಿ ಸಫಾರಿ ರಸ್ತೆ ಅಭಿವೃದ್ಧಿಪಡಿಸಲಾಗಿದೆ. 43 ಲಕ್ಷ ರೂ. ವೆಚ್ಚದಲ್ಲಿ ಮೂಲಭೂತ ಸೌಲಭ್ಯಗಳೊಂದಿಗೆ ಗೊಟ್ಟಂಗೊಟ್ಟದಲ್ಲಿ ಎರಡು ಹೆಚ್ಚುವರಿ ಟೆಂಟ್ ಹೌಸ್‌ ನಿರ್ಮಿಸಲಾಗಿದೆ. 14 ಲಕ್ಷ ರೂ. ವೆಚ್ಚದಲ್ಲಿ ಮನರಂಜನಾ ಚಟುವಟಿಕೆಗಳಿಗಾಗಿ 12 ಆಸನಗಳ ಮೋಟಾರ್ ದೋಣಿ ಮತ್ತು ಎರಡು ಪೆಡಲ್ ದೋಣಿಗಳು ಮತ್ತು ಕಯಾಕ್ ಗಳನ್ನು ಒದಗಿಸಲಾಗಿದೆ. ಇದಲ್ಲದೆ ಕೆಕೆಆರ್ ಡಿಬಿಯ ಮ್ಯಾಕ್ರೋ ಅನುದಾನದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯಕ್ರಮಗಳು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವುದರಲ್ಲಿ ಅನುಮಾನವಿಲ್ಲ. ಇಲ್ಲಿನ ಪ್ರವಾಸೋದ್ಯಮ ಹೆಚ್ಚಿದಂತೆ ಸ್ಥಳೀಯ ಆರ್ಥಿಕತೆಗೆ ಉತ್ತೇಜನ ದೊರಕುತ್ತದೆ ಮತ್ತು ಸ್ಥಳೀಯರ ಉದ್ಯೋಗಾವಕಾಶಗಳು ಹೆಚ್ಚುತ್ತದೆ ಎಂಬ ನಂಬಿಕೆ ನಮ್ಮದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.ಪ್ರವಾಸೋದ್ಯಮದ ಈ ಬೆಳವಣಿಗೆಯಿಂದ ಸ್ಥಳೀಯ ಹೋಟೆಲ್ ಉದ್ಯಮ, ಸಣ್ಣ ವ್ಯಾಪಾರಿಗಳು ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಲಿವೆ. ಮುಂದಿನ ಎರಡು ವರ್ಷದಲ್ಲಿ ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮದ ಚಿತ್ರಣವೇ ಬದಲಾಗಲಿದ್ದು, ಜಿಲ್ಲೆಯ ಆಹಾರ, ಕಲೆ ಸಂಸ್ಕೃತಿ, ಪ್ರವಾಸಿ ತಾಣಗಳನ್ನು ಪರಿಚಯಿಸುವ ಮೂಲಕ ಇದಙದು ಉಳಿಸಿ ಬೆಳಸಲು ನಮ್ಮ ಸರ್ಕಾರದ ಬದ್ದವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಪ್ರಸಕ್ತ ವರ್ಷ ಸನ್ನತಿ, ನಾಗಾವಿ, ಮಳಖೇಡ್ ಕೋಟೆ, ಕಾಳಗಿ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಅಭಿವೃದ್ದಿಪಡಿಸಲಾಗುತ್ತಿದೆ. ಕಲಬುರಗಿ ಕೋಟೆಯಲ್ಲಿನ‌ ನಿವಾಸಿಗಳನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬೇರೆಡೆ ಸ್ಥಳಾಂತರಿಸಲಾಗುತ್ತಿದ್ದು,‌ ನಿವಾಸಿಗಳ ಮನವೊಲಿಸುವ ಕೆಲಸ ನಡೆದಿದೆ. ಮುಂದಿನ ಒಂದು ತಿಂಗಳಲ್ಲಿ ಅದು ಸಹ ಪೂರ್ಣವಾಗಲಿದೆ. ಇದರಿಂದ ಪಾರಂಪರಿಕ ಕೋಟೆ‌ ಮತ್ತೆ ತನ್ನ ಮೆರಗಿನಿಂದ ಪ್ರವಾಸಿಗರನ್ನು ಅಕರ್ಷಿಸಲಿದೆ ಎಂದರು.ಜಂಗಲ್ ಲಾಡ್ಜೆಸ್-ರೆಸಾರ್ಟ್ ಆರಂಭ
ಇಲ್ಲಿನ ಪ್ರಕೃತಿ ಸೊಬಗನ್ನು ಆನಂದಿಸಲು ಪ್ರವಾಸಿಗರ ತಂಗಲು ಅನುಕೂಲವಾಗುವಂತೆ ಚಂದ್ರಂಪಳ್ಳಿಯಲ್ಲಿ ಜಂಗಲ್ ಲಾಡ್ಜೆಸ್ ಮತ್ತು ರೆಸಾರ್ಟ್ ಆರಂಭಿಸುವ ಚಿಂತನೆ ಇದೆ. ಎಲ್ಲದಕ್ಕು ಪರಿಸರ‌ ಕ್ಲಿಯರೆನ್ಸರ ಅಗತ್ಯವಿದ್ದು, ಅದು ಸಿಕ್ಕಿದ ಮೇಲೆ ನೀಲಿ ನಕ್ಷೆ ಸಿದ್ದಪಡಿಸಿ ಇದನ್ನೆಲ್ಲ ಅನುಷ್ಠಾನಕ್ಕೆ ತರಲಾಗುವು ಎಮದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಬೋಟಿಂಗ್ ಗೆ 175 ರೂ.,ಸಫಾರಿಗೆ 450 ರೂ:  ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ ಮಾತನಾಡಿ, ಚಂದ್ರಂಪಳ್ಳಿ ಜಲಾಶಯದಲ್ಲಿ ಬೋಟಿಂಗ್ ನಡೆಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಬೋಟ್ ಆಪರೇಟರ್‌ಗಳಿಗೆ ಗೋವಾದ 'ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವಾಟರ್ ಸ್ಪೋರ್ಟ್ಸ್' ಸಂಸ್ಥೆಯಿಂದ ವಿಶೇಷ ತರಬೇತಿ ಕೊಡಿಸಲಾಗಿದೆ. ಸ್ಥಳೀಯ 15 ಯುವಕರಿಗೆ ಈಜುವುದು ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಹೇಗೆ ಕಾರ್ಯನಿರ್ವಹಿಸಬೇಕು ಎಂಬ ಬಗ್ಗೆ ತರಬೇತಿ ನೀಡಲಾಗಿದೆ. ಬೋಟ್ ನಡೆಸಲು ಅಗತ್ಯವಿರುವ ಲೈಸೆನ್ಸ್ ಮತ್ತು ಇನ್ಶೂರೆನ್ಸ್ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಲೈಫ್ ಜಾಕೆಟ್‌ಗಳು ಮತ್ತು ಅಗ್ನಿಶಾಮಕ ಉಪಕರಣಗಳನ್ನು ಪ್ರತಿ ಬೋಟ್‌ನಲ್ಲಿ ಕಡ್ಡಾಯಗೊಳಿಸಲಾಗಿದೆ ಎಂದರು.
ಬೋಟ್ ರೈಡಿಂಗ್ ಗೆ ಪ್ರತಿ ವ್ಯಕ್ತಿಗೆ 175 ರೂ. ದರ ನಿಗದಿಪಡಿಸಿದೆ. ಇನ್ನು ಅರಣ್ಯ ಸುತ್ತುವ ಜೀಪ್‌ ಸಫಾರಿಗೆ ವಯಸ್ಕರಿಗೆ 450 ರೂ., ಮಕ್ಕಳಿಗೆ 200 ರೂ. ದರ ಇರಲಿದೆ. ಇದಲ್ಲದೆ, ದೂರದ ಊರುಗಳಿಂದ ಬರುವ ಪ್ರವಾಸಿಗರಿಗಾಗಿ ಜಲಾಶಯದ ಸಮೀಪವಿರುವ ಕಾಟೇಜ್ ಜೊತೆಗೆ ಹೆಚ್ಚುವರಿಯಾಗಿ ತಂಗಲು ಟೆಂಟ್ ಹೌಸ್ ವ್ಯವಸ್ಥೆಯನ್ನು ವೈಜ್ಞಾನಿಕವಾಗಿ ಮಾಡಲಾಗುತ್ತಿದೆ ಎಂದರು.
ವಿಧಾನ ಪರಿಷತ್ ಶಾಸಕ ಜಗದೇವ ಗುತ್ತೇದಾರ, ಕೆ.ಕೆ.ಆರ್.ಟಿ.ಸಿ ಅಧ್ಯಕ್ಷ ಅರುಣಕುಮಾರ‌ ಪಾಟೀಲ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಕಲಬುರಗಿ ವಲಯದ ಅರಣ್ಯ ಸಂರಕ್ಷಣಾಧಿಕಾರಿ ಸುನಿಲ ಪನ್ವಾರ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜಂಟಿ ತೋಟಗಾರಿಕೆ ನಿರ್ದೇಶಕ ಸಂತೋಷ ಇನಾಂದಾರ, ವಲಯ ಅರಣ್ಯಾಧಿಕಾರಿಗಳಾದ.ಜಗನ್ನಾಥ ಕೊರಳಿ ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಜಾಣ, ಅರಣ್ಯಾಧಿಕಾರಿಗಳಾದ ಗುಂಡಪ್ಪ .ಮುಖಂಡರಾದ ಸುಭಾಷ ರಾಠೋಡ, ಕೈಲಾಶನಾಥ ಪಾಟೀಲ, ದೀಪಕನಾಗ್ ಪುಣ್ಯಶೆಟ್ಟಿ ಸೇರಿದಂತೆ ಅರಣ್ಯ ಇಲಾಖೆಯ ಇತರೆ ಅಧಿಕಾರಿಗಳು ಇದ್ದರು.

ವರದಿ: ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ