ಸವದತ್ತಿ: ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ 2026-2027ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಹಾಗೂ ಬಾಯ್ಲರ್ ಪ್ರದೀಪನ ಸಮಾರಂಭಕ್ಕೆ ಸೋಮವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಚಾಲನೆ ನೀಡಲಾಯಿತು.
ಹೂಲಿ ಸಾಂಬಯ್ಯನವರ ಮಠದ ಉಮೇಶ್ವರ ಶಿವಾಚಾರ್ಯ ಅಜ್ಜನವರ ಹಸ್ತದಿಂದ ಬಾಯ್ಲರ್ ಪ್ರದೀಪನ ನೆರವೇರಿಸುವ ಮೂಲಕ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
2025-2026ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಹರ್ಷ ಸಕ್ಕರೆ ಕಾರ್ಖಾನೆಗೆ ಅತಿಹೆಚ್ಚು ಕಬ್ಬು ಪೂರೈಸಿದ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು.
ಕಾರ್ಖಾನೆಯ ಚೇರ್ಮನ್ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಗಿರಿಜಾ ಹಟ್ಟಿಹೊಳಿ, ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಾರ್ಖಾನೆಯ ನಿರ್ದೇಶಕ ಮೃಣಾಲ್ ಹೆಬ್ಬಾಳಕರ್ ಉಪಸ್ಥಿತರಿದ್ದರು.


