ಹಾವೇರಿ: ರಾಜ್ಯದಲ್ಲಿ ತಲೆದೂರಿರುವ ಮಳೆ ಕೊರತೆಯ ಪರಿಸ್ಥಿತಿಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ವಾಸ್ತವ ಸ್ಥಿತಿಯ ಪರಿಶೀಲನಾ ವರದಿಗಳನ್ನು ತರಿಸಿಕೊಳ್ಳಲಾಗುತ್ತಿದೆ.
ಎಲ್ಲಾ ಜಿಲ್ಲೆಗಳ ಸಮಗ್ರ ವರದಿ ಕೈಸೇರಿದ ಬಳಿಕ, ಪರಿಸ್ಥಿತಿಯ ಅಗತ್ಯತೆಗೆ ತಕ್ಕಂತೆ ಬರಗಾಲ ಘೋಷಿಸುವ ಕುರಿತು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ಈಗಾಗಲೇ ಮುಂಗಾರು ನಂಬಿ ಬಿತ್ತನೆ ಕಾರ್ಯ ಮುಗಿಸಿರುವ ರೈತರು ಮಳೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಕೈಕೊಟ್ಟಿದ್ದರಿಂದ ರೈತರಿಗೆ ಉಂಟಾಗಿರುವ ನಷ್ಟದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಲೆಹಾಕಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.
ಈ ಅಧಿಕೃತ ವರದಿಯ ಆಧಾರದ ಮೇಲೆಯೇ ಸಂತ್ರಸ್ತ ರೈತರಿಗೆ ಪರಿಹಾರ ವಿತರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.


