LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸೆಪ್ಟೆಂಬರ್‌ ದಲ್ಲಿ ವಾರದೊಳಗಾಗಿ ಕೇಂದ್ರಕ್ಕೆ ಬರ ವರದಿ ಸಲ್ಲಿಕೆ : ಡಿಸಿಎಂ ಡಾ.ಜಿ.ಪರಮೇಶ್ವರ್ 

Advertisement

ಮೈಸೂರು : ರಾಜ್ಯದಲ್ಲಿ 101 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದೇವೆ. ಇನ್ನೂ 15 ದಿನಗಳಿಗೆ ಪರಿಶೀಲನೆ ಮಾಡುತ್ತೇವೆ. ಆ ಬಳಿಕ ಕೆಲವು ತಾಲೂಕುಗಳು ಬರಪೀಡಿತ ಪ್ರದೇಶದ ವರ್ಗಕ್ಕೆ ಬರುವ ಸಾಧ್ಯತೆ ಇರುತ್ತದೆ. ಅವುಗಳ ಆಧಾರದ ಮೇಲೆ ಮತ್ತೆ ಘೋಷಣೆ ಮಾಡುತ್ತೇವೆ.

ಈ ತಿಂಗಳ ಕೊನೆಗೆ ಅಥವಾ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಕೇಂದ್ರಕ್ಕೆ ಬರ ವರದಿಯನ್ನು ಸಲ್ಲಿಸುತ್ತೇವೆ. ಬೆಳೆ ನಷ್ಟವನ್ನು ಅಂದಾಜು ಮಾಡಲಾಗುತ್ತಿದ್ದು, ಅದರ ಆಧಾರದ ಮೇಲೆ ಮೊಮೊರಾಂಡಮ್‌ ಅನ್ನು ಸಿದ್ಧಪಡಿಸುತ್ತೇವೆ. ಆ ಬಳಿಕ ಕೇಂದ್ರದಿಂದ ತಂಡಗಳು ಬಂದು ರಾಜ್ಯದಲ್ಲಿ ಸಮೀಕ್ಷೆ ನಡೆಸುತ್ತಾರೆ. ನಂತರ ಬರ ಪರಿಹಾರ ಬಿಡುಗಡೆಯಾಗುತ್ತದೆ.

ರೈತರಿಗೆ ಎಕರೆಗೆ ಏನು ಪರಿಹಾರ ಕೊಡಬೇಕು ಎಂಬ ಬಗ್ಗೆ ನಿರ್ಧಾರ ಮಾಡುತ್ತೇವೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಗುಳೆ ತಪ್ಪಿಸಲು ಕಾಮಗಾರಿಗಳನ್ನು ಕೈಗೊಳ್ಳುವುದು ನಮ್ಮ ಮೊದಲ ಆದ್ಯತೆ. ಈ ವಿಚಾರವಾಗಿ ಈಗಾಗಲೇ ಕ್ರಮಕೈಗೊಳ್ಳುತ್ತಿದ್ದೇವೆ. 

ರಾಜ್ಯದಲ್ಲಿ 2023ರಲ್ಲಿ ಉಂಟಾದ ಬರಗಾಲದಿಂದ ₹39,000 ಕೋಟಿ ನಷ್ಟವಾಗಿತ್ತು. ₹18,000 ಕೋಟಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ನಾವು ದೆಹಲಿಯಲ್ಲಿ ಹೋಗಿ ಪ್ರತಿಭಟನೆ ನಡೆಸಿ, ಸುಪ್ರೀಂ ಕೋರ್ಟ್ ನಿರ್ದೇಶನದ ಬಳಿಕ ₹3,500 ಕೋಟಿ ಬಿಡುಗಡೆ ಮಾಡಿದರು. ಈ ಬಾರಿ ಹಾಗಾಗಬಾರದು.

ಈ ವರ್ಷ ನಾನು ಕೇಂದ್ರಕ್ಕೆ ಮನವಿಯನ್ನು ಮಾಡಿದ್ದೇನೆ. ಕಳೆದ ಬಾರಿಯ ಘಟನೆಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು. ನಾವು ಮೆಮೊರಾಂಡಮ್‌ ಏನು ಸಲ್ಲಿಸುತ್ತೇವೆಯೋ ಅದನ್ನು ಬರ ಘೋಷಣೆಗಿರುವ ಮಾನದಂಡಗಳಂತೆ ಮಾಡಿದ್ದೇವೆ.

ಅದನ್ನು ಪರಿಶೀಲಿಸಿ, ನಮಗೆ ಪರಿಹಾರ ಹಣವನ್ನು ಕೊಡಲಿ. ಎಸ್‌ಡಿಆರ್‌ಎಫ್‌ನಲ್ಲಿ ₹1,200 ಕೋಟಿ ಹಣವನ್ನು ಕೊಡಲು ತೀರ್ಮಾನ ಮಾಡಿದ್ದಾರೆ. ಇನ್ನೂ ಅದನ್ನು ನಮಗೆ ಕೊಡಬೇಕು. 

ನಮ್ಮದು 25% ಹಾಗೂ ಕೇಂದ್ರದಿಂದ 75% ಇರುತ್ತೆ. 1,200 ಕೋಟಿ ಹಣವನ್ನು ತಕ್ಷಣ ಬಿಡುಗಡೆ ಮಾಡಿ ಎಂದು ಅವರಿಗೆ ಹೇಳಿದ್ದೇವೆ. ಅದು ಬಿಡುಗಡೆಯಾದರೆ ನಾವು ನಮ್ಮ ರೈತರಿಗೆ ಪರಿಹಾರ ಕೊಡಲು ಅನುಕೂಲವಾಗುತ್ತದೆ. ಒಂದು ವಾರ ಅಥವಾ 10 ದಿನಗೊಳಗಾಗಿ ಹಣವನ್ನು ರೈತರಿಗೆ ಕೊಟ್ಟುಬಿಡುತ್ತೇವೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ