ರಾವಲಪಿಂಡಿ: ಶ್ರೀಲಂಕಾ ಕ್ರಿಕೆಟ್ ತಂಡವು ಪಾಕಿಸ್ತಾನ ವಿರುದ್ಧ ಇಂದಿಲ್ಲಿ ಆರಂಭವಾದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನ ಆರಂಭಿಕ ಅಘಾತಗಳನ್ನು ಕಂಡಿದ್ದು, 32 ರನ್ ಗಳಿಸುವಷ್ಟರಲ್ಲಿ ಪ್ರಮುಖ 4 ವಿಕೆಟ್ ಕಳೆದುಕೊಂಡಿದೆ.
ಇಲ್ಲಿನ ರಾವಲಪಿಂಡಿ ಕ್ರಿಕೆಟ್ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಶ್ರೀಲಂಕಾ ಮೊಹ್ಮದ್ ಅಬ್ಬಾಸ್ ಹಾಗೂ ಇತರ ವೇಗಿಗಳ ಮಾರಕ ದಾಳಿಗೆ ತತ್ತರಿಸಿತು.


