Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೌಲ್ಯಾಧಾರಿತದಿಂದ ಅಂಕ ಆಧಾರಿತ ವ್ಯವಸ್ಥೆಗೆ ಶಿಕ್ಷಣ : ಆನಂದರಾಜು ಆತಂಕ

Advertisement
ತುರುವೇಕೆರೆ: ಶಿಕ್ಷಣವು ಮೌಲ್ಯಾಧಾರಿತ ವ್ಯವಸ್ಥೆಯಿಂದ ಅಂಕ ಆಧಾರಿತ ವ್ಯವಸ್ಥೆಗೆ ಬದಲಾಗಿರುವುದು ಶೋಚನೀಯ, ಇದರಿಂದ ಗುಣಮಟ್ಟದ ಮೌಲ್ಯಯುತ ಪ್ರಜೆಗಳನ್ನು ಸಮಾಜದಲ್ಲಿ ಕಾಣಲು ಸಾಧ್ಯವಿಲ್ಲ ಎಂದು ನಿವೃತ್ತ ಪ್ರಾಂಶುಪಾಲ ಆನಂದರಾಜು ಆತಂಕ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅಂಕ ಗಳಿಕೆ ವಿದ್ಯಾರ್ಥಿಯ ಬೌದ್ದಿಕ ಮಟ್ಟ ಹೇಗಿದ ಎಂಬುದನ್ನು ತಿಳಿಸಬಹುದೇ ವಿನಃ ಮಾನವೀಯ ಮೌಲ್ಯಗಳು, ಸಾಮಾಜಿಕ ಚಿಂತನೆಯ ಮಾನದಂಡವಾಗುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಅಂಕ ಗಳಿಸುವ ಯಂತ್ರಗಳಾಗದೆ ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳುವ ಶಿಕ್ಷಣ ಪಡೆಯಲು ಆಸಕ್ತರಾಗಬೇಕು. ವಿದ್ಯೆಯ ಜೊತೆಗೆ ಸಂಸ್ಕಾರ ಮತ್ತು ವಿನಯತೆ ಬೆಳೆಸಿಕೊಂಡಾಗ ಮಾತ್ರ ಕಲಿತ ವಿದ್ಯೆ ಸಾರ್ಥಕವಾಗಿ ಜೀವನದಲ್ಲಿ ಯಶಸ್ಸು ದೊರೆಯುತ್ತದೆ ಎಂದು ತಿಳಿಸಿದರು.



ವಿದ್ಯಾರ್ಥಿಗಳು ತನ್ನಲ್ಲಿರುವ ಕೀಳರಿಮೆಯನ್ನು ಮೊದಲು ಹೋಗಲಾಡಿಸಬೇಕು. ವಿದ್ಯಾಬ್ಯಾಸದ ಹಂತದಲ್ಲಿ ತನಗೆ ಗೊತ್ತಿಲ್ಲದ ಪಠ್ಯದ ವಿಷಯಗಳನ್ನು ಉಪನ್ಯಾಸಕರ ಬಳಿ ಕೇಳಿ ತಿಳಿದುಕೊಳ್ಳುವುದಕ್ಕೆ ಹಿಂಜರಿಯಬಾರದು. ಪ್ರತಿಯೊಬ್ಬರ ಬೌದ್ದಿಕ ಮಟ್ಟವೂ ಬೇರೆ ಬೇರೆಯಾಗಿರುತ್ತದೆ. ಕೆಲವರು ಬೇಗ ವಿಷಯವನ್ನು ಗ್ರಹಿಸುವ, ಅರ್ಥೈಸಿಕೊಳ್ಳುವ ಶಕ್ತಿಯನ್ನು ಹೊಂದಿದ್ದರೆ, ಕೆಲವರು ನಿಧಾನವಾಗಿ ಗ್ರಹಿಸಬಲ್ಲವರಾಗಿರುತ್ತಾರೆ. ಆ ಕಾರಣದಿಂದ ತನಗೆ ಏನೂ ಗೊತ್ತಾಗುವುದಿಲ್ಲ, ಅರ್ಥವಾಗುವುದಿಲ್ಲ ಎಂದು ಸುಮ್ಮನಾಗದೆ ವಿಷಯವನ್ನು ಅರ್ಥಮಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನವನ್ನು ಮಾಡಬೇಕು. ಹಿಂಜರಿಕೆ, ಕೀಳರಿಮೆಯ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳದ ಹೊರತು ಯಶಸ್ಸು ಸಾಧಿಸಲು ಸಾಧ್ಯವಿಲ್ಲ ಎಂದರು.

ಕಾಲೇಜಿನ ಪ್ರಾಂಶುಪಾಲ ಕೆ.ಎಲ್.ಅನಂತರಾಮು ಅಧ್ಯಕ್ಷತೆ ವಹಿಸಿದ್ದರು. ಬೇರೆಡೆಗೆ ವರ್ಗಾವಣೆಗೊಂಡಿರುವ ಉಪನ್ಯಾಸಕರಾದ ವಿನಯ್, ಪೂರ್ಣಚಂದ್ರ ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕರಾದ ನಂಜೇಗೌಡ, ಶಹನಾಜ್, ಹರೀಶ್, ಕೋಮಲ ಸೇರಿದಂತೆ ಬೋಧಕ, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ