LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನನ್ನನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ : ಕೆ. ಎಸ್ ಈಶ್ವರಪ್ಪ 

Advertisement

ಶಿವಮೊಗ್ಗ: ಬಿಜೆಪಿ ಬಿಟ್ಟು ಬೇರೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. 

ತಮ್ಮನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ ಎಂದಿರುವ ಅವರು, ಪಕ್ಷದಲ್ಲಿನ ಗೊಂದಲಗಳು ಸರಿಯಾದರೆ ಮಾತ್ರ ಮರಳಿ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಬಿಜೆಪಿ ನನ್ನ ಮಾತೃ ಪಕ್ಷವಾಗಿದೆ. ಆದರೆ ಬಿಜೆಪಿಯಲ್ಲಿ ಕೆಲ ಗೊಂದಲಗಳಿದ್ದು, ಅವು ಸರಿಯಾಗಬೇಕು.

ಸಂಘಟನೆ ದೃಷ್ಟಿಯಿಂದ ಪಕ್ಷದಲ್ಲಿ ಕೆಲವು ಬದಲಾವಣೆಗಳು ಆಗಬೇಕಾಗಿದೆ. ಆ ಬದಲಾವಣೆಗಳು ಪಕ್ಷದ ಹಿತದೃಷ್ಟಿಯಿಂದ ನಡೆದರೆ ಒಳ್ಳೆಯದು ಎಂದರು.

ನಾನು ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದೇನೆ. ಆದರೆ ಅವು ಬಿಜೆಪಿಗೆ ಮರಳಲು ಹಾಕಿರುವ ಷರತ್ತುಗಳಲ್ಲ. ಬಿಜೆಪಿ ಸೇರ್ಪಡೆಗೆ ಯಾವುದೇ ಷರತ್ತು ವಿಧಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು... ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ, ಹಿರಿಯರು ಕಟ್ಟಿದ ಕಾಂಗ್ರೆಸ್ ಪಕ್ಷ ಇಂದು ಬೀದಿಗೆ ಬಂದಿದೆ ಎಂದು ಟೀಕಿಸಿದರು.

1885ರಲ್ಲಿ ರಾಷ್ಟ್ರಭಕ್ತರು ಸೇರಿ ಕಟ್ಟಿದ ಕಾಂಗ್ರೆಸ್ ಪಕ್ಷ ಈಗ ಅಧಿಕಾರಕ್ಕಾಗಿ ಕೆಳಮಟ್ಟಕ್ಕೆ ಇಳಿದಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಸ್ವಾರ್ಥವೇ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿದರು.

ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದ ಕಾರಣ ಹಲವು ಶಾಸಕರು ಅತೃಪ್ತರಾಗಿದ್ದಾರೆ. ಅವರ ಬೆಂಬಲಿಗರು ಮುಖ್ಯಮಂತ್ರಿ ವಿರುದ್ಧವೇ ಧಿಕ್ಕಾರ ಕೂಗುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಕೆಲ ಶಾಸಕರಿಗೆ ಸಚಿವ ಸ್ಥಾನ ಕೊಡಿಸುವ ಭರವಸೆ ನೀಡಿದ್ದರು ಎಂದೂ ಈಶ್ವರಪ್ಪ ಆರೋಪಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ