Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಸಿಕೆರೆ ನಗರದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Advertisement
ಹಬ್ಬದ ಸಂಭ್ರಮವನ್ನು ಪರಸ್ಪರ ವಿನಿಮಯ ಮಾಡಿಕೊಂಡ ಮುಸ್ಲಿಂ ಬಾಂಧವರು

ಅರಸೀಕೆರೆ : ನಗರದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.

ಮುಸ್ಲಿಮರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ನಗರದ ಸುನ್ನಿ ಜಾಮಿಯಾ ಮಸೀದಿಯಿಂದ ಈದ್ ಮೆರವಣಿಗೆ ಹೊರಟು, ಈದ್ಗಾ ಮೈದಾನದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು.
ನಮಾಜ್ ನಿರ್ವಹಿಸಿ ಈದ್ ಸಂದೇಶ ನೀಡಿದ ಸುನ್ನಿ ಜಾಮಿಯಾ ಮಸೀದಿ ಧರ್ಮ ಗುರುಗಳಾದ ಮೌಲಾನಾ ನಜರ್ ಆಲಂ ಸಾಬ್ ರವರು
ಪವಿತ್ರ ರಂಝಾನ್ ಮಾಸದಲ್ಲಿ ನಾವು ಪಾಲಿಸಿದ ಶಿಸ್ತು, ಸಂಯಮ ಮತ್ತು ಪ್ರಾರ್ಥನೆಗಳು ಕೇವಲ ಒಂದು ತಿಂಗಳಿಗೆ ಮಾತ್ರ ಸೀಮಿತವಾಗದೆ ಜೀವನದುದ್ದಕ್ಕೂ ಆ ದೈವಭಕ್ತಿಯನ್ನು ಉಳಿಸಿಕೊಳ್ಳುವಂತಾಗಲಿ. ಹಸಿದವರಿಗೆ ಊಟಬಡಿಸುವುದು ಮತ್ತು ಬಡವರ ಕಣ್ಣೀರು ಒರೆಸುವುದು ಈ ಹಬ್ಬದ ಮುಖ್ಯ ಉದ್ದೇಶ. ‘ಫಿತ್ರ್ ಝಕಾತ್’ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ನಮ್ಮ ಕರ್ತವ್ಯ. ನೆರೆಹೊರೆಯವರೊಂದಿಗೆ, ಅನ್ಯಧರ್ಮೀಯ ಬಾಂಧವರೊಂದಿಗೆ ಪ್ರೀತಿ ಮತ್ತು ವಿಶ್ವಾಸದಿಂದ ವರ್ತಿಸುವ ಮೂಲಕ ಕೋಮು ಸೌಹಾರ್ದತೆಯನ್ನು ಕಾಪಾಡಬೇಕು. ಹಬ್ಬದ ಹೆಸರಿನಲ್ಲಿ ಅನಾಚಾರ ಅಥವಾ ದುಂದುವೆಚ್ಚಗಳಿಗೆ ಅವಕಾಶ ನೀಡದೆ, ಶರೀಅತ್ ಚೌಕಟ್ಟಿನೊಳಗೆ ಸಂಭ್ರಮಿಸಬೇಕು. ರಂಝಾನ್ ನಮಗೆ ಕಲಿಸಿದ ತಾಳ್ಮೆ ಮತ್ತು ದೈವಭಕ್ತಿ ನಮ್ಮ ಮುಂದಿನ ಜೀವನದ ದಾರಿದೀಪವಾಗಲಿ. ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲಿ ಮತ್ತು ಪ್ರತಿಯೊಬ್ಬರ ಜೀವನದಲ್ಲಿ ಅಲ್ಲಾಹನು ಬರಕತ್ ನೀಡಲಿ. ಈದ್ ಹಬ್ಬದ ಪವಿತ್ರ ಸಂದೇಶವು ಜಾಗತಿಕ ಸಾಮರಸ್ಯ, ಪರಸ್ಪರ ಗೌರವ ಮತ್ತು ಎಲ್ಲಾ ಗಡಿಗಳನ್ನು ಮೀರಿದ ಶಾಶ್ವತ ಶಾಂತಿಗೆ ಪ್ರೇರಣೆಯಾಗಲಿ ಎಂದು ಹೇಳಿದರು.



ಯುವಜನತೆ ಮಾದಕ ವ್ಯಸನಗಳಿಗೆ ಬಲಿಯಾಗ ದಂತೆ ಜಾಗೃತಿ ಮೂಡಿಸಿದರು. ಅಲ್ಲದೆ ಎಲ್ಲರೂ ಪರಸ್ಪರ ಸಹೋದರಂತೆ ಬದುಕಿ ಶಾಂತಿಯ ವಾತಾವರಣ ನಿರ್ಮಿಸುವಂತೆ ಸೌಹಾರ್ದ ಸಂದೇಶ ನೀಡಿದರು. ನಂತರ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಸ್ಥಳೀಯ ಶಾಸಕರಾದ ಕೆಎಂ ಶಿವಲಿಂಗೇಗೌಡರು ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಹಾಗೂ ಜನತೆಗೆ ಈದುಲ್ ಫಿತ್ರ್ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಈ ಪವಿತ್ರ ಹಬ್ಬವು ಎಲ್ಲರ ಜೀವನದಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿಯನ್ನು ತರಲಿ ಎಂದು ಅವರು ಹಾರೈಸಿದ್ದಾರೆ. ಇದೇ ವೇಳೆ ಜಾಗತಿಕವಾಗಿ ಸೃಷ್ಟಿಯಾಗಿರುವ ಯುದ್ಧ ಮತ್ತು ಸಂಘರ್ಷದ ವಾತಾವರಣವು ತಿಳಿಯಾಗಿ, ಎಲ್ಲೆಡೆ ಶಾಂತಿ ಸ್ಥಾಪನೆಯಾಗಲಿ ಮತ್ತು ಸಂಕಷ್ಟದಲ್ಲಿರುವವರಿಗೆ ದೈವಿಕ ನೆರವು ಸಿಗಲಿ ಎಂದು ಅವರು ಆಶಿಸಿದ್ದಾರು.

ಜಗತ್ತಿನ ಪ್ರಬಲ ಶಕ್ತಿಗಳು ಯುದ್ಧದ ಉನ್ಮಾದದಲ್ಲಿದೆ. ಮನುಷ್ಯ ಜೀವಗಳು ಅಮಾನವೀಯವಾಗಿ ಜೀವತೆತ್ತಿದೆ. ಈ ಅಮಾನುಷ ಕ್ರೌರ್ಯ ಗಳು ಕೊನೆಗೊಂಡು ಜಾಗತಿಕ ಶಾಂತಿ ಸಮಾಧಾನಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಮಾಜ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ಹಾಗೂ ವಿನಿಮಯ ಮಾಡಿಕೊಂಡರು ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಸಂತೋಷ ಕುಮಾರ್, ಡಿವೈಎಸ್ಪಿ ರವರದ ಗೋಪಿ ರವರು, ನಗರಸಭೆ ಪೌರಾಯುಕ್ತರದ ಕೃಷ್ಣಮೂರ್ತಿ ನಗರ ಸಭೆ ನಿಕಟಪೂರ್ವ ಅಧ್ಯಕ್ಷರಾದ ಎಂ ಸಮಿಉಲ್ಲಾ, ಹಾಸನ ಜಿಲ್ಲೆ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷರಾದ ಸೈಯದ್ ಸಿಕಂದರ್, ಕರವೇ ಜಿಲ್ಲಾಉಪಧ್ಯಕ್ಷರದ ಹೇಮಂತ್ ಕುಮಾರ್ ಮುಸ್ಲಿಂ ಬಾಂಧವರಿಗೆ ಈದ್ ಹಬ್ಬದ ಶುಭಾಶಯಗಳನ್ನು ಕೋರಿದರು.

ಸುನ್ನಿ ಮುಸ್ಲಿಂ ಜಮಾತ್ ಕಮಿಟಿ ಅಧ್ಯಕ್ಷರಾದ ಅಪ್ರೋಜ್ ಪಾಷಾ, ಕಾರ್ಯದರ್ಶಿ ಅಬ್ದುಲ್ ಜಮೀಲ್, ಖಜಾಂಚಿ ಸೈಯದ್ ಸಾಬ್, ಹಾಗೂ ಪದಾಧಿಕಾರಿಗಳು ಜನಪ್ರತಿನಿಧಿಗಳು, ರಾಜಕೀಯ ಮುಖಂಡರು ಹಾಗೂ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ :ರಾಜು ಅರಸೀಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ