LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ವಿಧಾನ ಪರಿಷತ್ ನಾಲ್ಕು ಸ್ಥಾನಗಳಿಗೆ ಚುನಾವಣೆ: ಇಂದು ಅಧಿಸೂಚನೆ ಪ್ರಕಟ

Advertisement

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದ್ದು, ಚುನಾವಣಾ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ ಪ್ರಕಟಿಸಿದೆ. ರಾಜ್ಯದ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ

ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟೆಂಬರ್ 29, ಮಂಗಳವಾರ ಅಧಿಸೂಚನೆ ಪ್ರಕಟವಾಗಲಿದೆ.

ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. 

ಅಕ್ಟೋಬರ್ 6 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಅಕ್ಟೋಬರ್ 9ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ಅಕ್ಟೋಬರ್ 23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಅಕ್ಟೋಬರ್ 27ರಂದು ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ. ಚುನಾವಣಾ ಪ್ರಕ್ರಿಯೆ ಅಕ್ಟೋಬರ್ 31ರೊಳಗೆ ಪೂರ್ಣಗೊಳ್ಳಲಿದೆ.

ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.

ಪ್ರಮುಖ ದಿನಾಂಕಗಳು:

ಅಧಿಸೂಚನೆ ಸೆ. 29

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅ. 6

ನಾಮಪತ್ರ ಪರಿಶೀಲನೆ ಅ. 7

ನಾಮಪತ್ರ ಹಿಂಪಡೆಯಲು ಕೊನೆಯ ದಿನ ಅ. 9

ಮತದಾನ ಅ. 23

ಮತ ಎಣಿಕೆ ಅ. 27

ಚುನಾವಣಾ ಪ್ರಕ್ರಿಯೆ ಪೂರ್ಣ ಅ. 31

ಆಗ್ನೇಯ ಪದವೀಧರ ಕ್ಷೇತ್ರದ ಚಿದಾನಂದ ಎಂ ಗೌಡ, ಪಶ್ಚಿಮ ಪದವೀಧರ ಕ್ಷೇತ್ರದ ಎಸ್.ವಿ. ಸಂಕನೂರು, ಈಶಾನ್ಯ ಶಿಕ್ಷಕರ ಕ್ಷೇತ್ರದ ಶಶಿಲ್ ನಮೋಶಿ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಪುಟ್ಟಣ್ಣ ಅವರ ಸದಸ್ಯತ್ವ ಅವಧಿ ನವೆಂಬರ್ 11ರಂದು ಅಂತ್ಯವಾಗಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಟ್ಟುಹಬ್ಬದ ಸಂಭ್ರಮದಲ್ಲೂ ಮಾನವೀಯತೆಯ ಸೇವೆಗೆ ಮುನ್ನುಡಿ ಬರೆದ ಜೀನೂರಿನ ಭಾಗ್ಯಶ್ರೀರಷ್ಯಾದಲ್ಲಿ ಯುದ್ಧ ವಿಮಾನ ಪತನ : ಆರು ಮಂದಿ ದಾರುಣ ಸಾವುಶಾಲಾ ವಾಹನ ಹರಿದು ಒಂದೂವರೆ ವರ್ಷದ ಮಗು ದಾರುಣ ಸಾವು ಕೊಕಟನೂರಿನ ಹೆಮ್ಮೆಗೆ ಮತ್ತೊಂದು ಗರಿವಾಲ್ಮೀಕಿ ನಿಗಮ ತಾಲೂಕ ಅಧಿಕಾರಿ ಗಜೇಂದ್ರ ಸಾರ್ವಜನಿಕರ ಜೊತೆ ದುರವರ್ತನೆ             ವಾಲ್ಮೀಕಿ ನಿಗಮ ತಾಲೂಕ ಅಧಿಕಾರಿ ಗಜೇಂದ್ರ ಸಾರ್ವಜನಿಕರ ಜೊತೆ ದುರವರ್ತನೆ             ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತಗೊಳಿಸಿದರೆ ಹುಷಾರ್: ಡಿ.ಕೆ ಶಿವಕುಮಾರ್ ಖಡಕ್ ಆದೇಶ444 ಕೋಟಿ ಟೆಂಡರ್ ಗೋಲ್‌ಮಾಲ್ ಆರೋಪ : ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು 3 ಲಕ್ಷ ಕೋಟಿಗಿಂತ ಹೆಚ್ಚು ಅವ್ಯವಹಾರ, ಅಶೋಕ್ ಖೇಣಿಗೆ ಒದ್ದು ಒಳಗೆ ಹಾಕಿ:ಕುಮಾರಸ್ವಾಮಿ ಬೈಲಹೊಂಗಲ : ವಿಚ್ಛೇದನ ಕೇಳಿದ್ದ ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದ ಪಾಪಿ ಪತಿ