LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ: ಬೆಂಬಲಿಗರಿಂದ ಬೃಹತ್ ಪ್ರತಿಭಟನೆ

Advertisement

ಬೆಳಗಾವಿ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರ ಮನೆ ಹಾಗೂ ಆಪ್ತರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ನಡೆಸುತ್ತಿರುವ ಶೋಧ ಕಾರ್ಯವನ್ನು (Raid) ಖಂಡಿಸಿ ಬೆಳಗಾವಿ (Belagavi) ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸಚಿವ ಬೆಂಬಲಿಗರು ಹಾಗೂ ಕಾಂಗ್ರೆಸ್ (Congress) ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಪಟ್ಟಣದ ಪ್ರಮುಖ ಕೇಂದ್ರವಾದ ಅಂಬೇಡ್ಕರ್ ವೃತ್ತದ ಬಳಿ ಜಮಾಯಿಸಿದ 500ಕ್ಕೂ ಹೆಚ್ಚು ಬೆಂಬಲಿಗರು, ಸಾಲಾಗಿ ನಿಂತು ಮಾನವ ಸರಪಳಿ ನಿರ್ಮಿಸುವ ಮೂಲಕ ಕೇಂದ್ರ ಸರ್ಕಾರ ಹಾಗೂ ಇಡಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಗುರಿಯಾಗಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ಪ್ರತಿಭಟನೆಯ ಭಾಗವಾಗಿ ಜೇವರ್ಗಿ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಕೆಲಕಾಲ ರಸ್ತೆ ತಡೆ ನಡೆಸಲಾಯಿತು. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.

ಸಚಿವರ ವಿರುದ್ಧ ನಡೆಯುತ್ತಿರುವ ಈ ಕ್ರಮವು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿದ್ದು, ಇಂತಹ ತಂತ್ರಗಳಿಗೆ ಸಚಿವರಾಗಲಿ ಅಥವಾ ಅವರ ಬೆಂಬಲಿಗರಾಗಲಿ ಹೆದರುವುದಿಲ್ಲ ಎಂದು ಪ್ರತಿಭಟನಾ ನಿರತ ನಾಯಕರು ಎಚ್ಚರಿಸಿದರು.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮಿಬಿಯಾ ವಿರುದ್ಧ ದ. ಆಪ್ರಿಕಾಗೆ 99 ರನ್ ಗಳ ವಿಜಯಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ: ಬೆಂಬಲಿಗರಿಂದ ಬೃಹತ್ ಪ್ರತಿಭಟನೆ2,186 ಕೋಟಿ ಅನುದಾನ ತಡೆ: ಕೇಂದ್ರದ ವಿರುದ್ಧ ಸುಪ್ರೀಂ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಮೊದಲ ದಿನವೇ ಇನ್ನಿಂಗ್ಸ್ ಲೀಡ್ ಇಂದು ಭಾರತ -ಶ್ರೀಲಂಕಾ ಮೊದಲ ಸೆಮಿ ಪೈನಲ್ ಜೆಪಿ ಆಂಗ್ಲ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ: ಉತ್ತಮ ಶಿಕ್ಷಕರಿಗೆ ಗೌರವ ಸಮರ್ಪಣೆಒಂದೇ ಮನೆಯಲ್ಲಿ ಇಬ್ಬರು ಪತ್ನಿಯರ ಜೊತೆ ಸಂಸಾರ : ಈಗ 3ನೇ ಮಹಿಳೆ ಜತೆ ಪತಿ ಪರಾರಿಕರೆ ಸ್ವೀಕರಿಸಿಲ್ಲ ಎಂದು ಮನನೊಂದು ಲವ್ವರ್'ಗೆ ವಿಡಿಯೋ ಕಾಲ್ ಮಾಡಿ ಮಹಿಳೆ ಆತ್ಮಹತ್ಯೆವಿಮಾನ ನಿಲ್ದಾಣಗಳಿಗೆ ಕನ್ನಡಿಗರ ಹೆಸರು ಹಾಗೂ ಮಹದಾಯಿ ಯೋಜನೆ ಜಾರಿಗಾಗಿ ಬೃಹತ್ ಹೋರಾಟವಿಮಾನ ನಿಲ್ದಾಣಗಳಿಗೆ ಕನ್ನಡಿಗರ ಹೆಸರು ಹಾಗೂ ಮಹದಾಯಿ ಯೋಜನೆ ಜಾರಿಗಾಗಿ ಬೃಹತ್ ಹೋರಾಟ