LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಾಹನ ಮಾರಾಟವಾದರೂ RC ಬದಲಾಗದಿದ್ದರೇ ಹಳೆ ಮಾಲೀಕರದ್ದೇ ಹೊಣೆ : ಹೈಕೋರ್ಟ್

Advertisement
ಬೆಂಗಳೂರು: ವಾಹನವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ್ದರೂ ಸಹ, ಅಧಿಕೃತವಾಗಿ ನೋಂದಣಿ ಪ್ರಮಾಣಪತ್ರದಲ್ಲಿ (RC) ಮಾಲೀಕತ್ವ ವರ್ಗಾವಣೆಯಾಗುವವರೆಗೆ ಅಪಘಾತಕ್ಕೆ ಸಂಬಂಧಿಸಿದ ಎಲ್ಲಾ ಕಾನೂನು ಹೊಣೆಗಾರಿಕೆಗಳು ನೋಂದಾಯಿತ ಮಾಲೀಕರದ್ದೇ ಆಗಿರುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ:

ಮಾರತಹಳ್ಳಿಯ ಸುನಿಲ್ ಕುಮಾರ್ ಎಂಬುವವರು ತಮ್ಮ ಬೈಕನ್ನು ಶಬ್ರೇಜ್ ಎಂಬುವವರಿಗೆ ಮಾರಾಟ ಮಾಡಿದ್ದರು. ಈ ಬೈಕ್ 2020ರ ಜೂನ್ 18ರಂದು ಹನುಮಂತ ಎಂಬುವವರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದರು. ಮೃತರ ಕುಟುಂಬದವರು ಪರಿಹಾರ ಕೋರಿ ಮೋಟಾರು ಅಪಘಾತ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಾಲಯದ ಆದೇಶ:

ವಿಮಾ ದಾಖಲೆಗಳಲ್ಲಿನ ಸಮಸ್ಯೆಯಿಂದಾಗಿ, ನೋಂದಾಯಿತ ಮಾಲೀಕರೇ ಪರಿಹಾರ ನೀಡಬೇಕು ಎಂದು ನ್ಯಾಯಮಂಡಳಿ ಈ ಹಿಂದೆ 33 ಲಕ್ಷ ರೂ. ಪರಿಹಾರ ನಿಗದಿಪಡಿಸಿತ್ತು.

ಪರಿಹಾರ ಹೆಚ್ಚಳ: ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ್ ಮತ್ತು ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠವು, ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿ ಮಾಲೀಕತ್ವ ವರ್ಗಾವಣೆಯಾಗದ ಹೊರತು ಮೊದಲ ಮಾಲೀಕನೇ ಹೊಣೆ ಎಂದು ಹೇಳಿದೆ. ಮೃತರ ಕುಟುಂಬಕ್ಕೆ 47.15 ಲಕ್ಷ ರೂ. ಪರಿಹಾರ ಪಾವತಿಸುವಂತೆ ಹೈಕೋರ್ಟ್ ಈಗ ಆದೇಶಿಸಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ