LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪ್ರತಿಯೊಬ್ಬರಿಗೂ ಪರಿಸರದ ಅರಿವು ಅಗತ್ಯ

Advertisement
ಪರಿಸರಕ್ಕೆ ಧಕ್ಕೆ ಮಾಡುವ ಮನುಷ್ಯನಿಗೆ ಇದು ಮಾನವ ಕುಲದ ಬೆಳವಣಿಗೆಗೆ ಧಕ್ಕೆ ಎಂಬ ಅರಿವು ಮೂಡಿಸಿದರೆ ಮಾತ್ರ ಬದಲಾವಣೆ ಸಾಧ್ಯ. ಕಳೆದ 44 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದಕ್ಕಾಗಿ ಜನಜಾಗೃತಿ ಮೂಡಿಸುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕೃಷಿ ಮೇಲ್ವಿಚಾರಕ ವೀರೇಶ್ ಹೇಳಿದರು.

ಸರಕಾರಿ ಆದರ್ಶ ವಿದ್ಯಾಲಯದಲ್ಲಿ ಸೋಮವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಬೀವೃದ್ಧಿ ಯೋಜನೆಯಿಂದ ಆಯೋಜಿಸಿದ್ದ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಮತ್ತು ಧರ್ಮಸ್ಥಳ ಸಂಸ್ಥೆ ಇಡೀ ರಾಜ್ಯದಲ್ಲಿ ಕೆರೆಗಳ ಹೂಳೆತ್ತುವುದು, ಕೃಷಿ ಅಭಿವೃದ್ಧಿ ಪಡಿಸುವುದು, ಪರಿಸರ ಸಂರಕ್ಷಿಸುವುದು, ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯದಲ್ಲಿ ಮುಂದಿದೆ.

ಸರ್ಕಾರದ ಜೊತೆಗೆ ಸಂಸ್ಥೆಯು ಒಂದು ಭಾಗವಾಗಿ ಜನಹಿತಕ್ಕೆ ಮುಂದಾಗಿದೆ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಕೃಷಿಕರನ್ನೊಳಗೊಂಡ ಇಂತಹ ಜಾಗೃತಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗುತ್ತಿದೆ. ಒಂದು ಊರಿನ ಸೊಗಸು ಆ ಊರಿನ ದೇವಸ್ಥಾನ, ಕೆರೆ, ಶಾಲೆ, ಆಸ್ಪತ್ರೆಗಳ ಸುವ್ಯವಸ್ಥೆಯನ್ನು ಅವಲಂಬಿಸಿದೆ.

ಇದೆಲ್ಲದರಲ್ಲಿ ಸಾರ್ವಜನಿಕರ ಪಾತ್ರ ಬಹು ಮುಖ್ಯವಾದದು ಎಂದರು.

ಈ ಸಂದರ್ಭದಲ್ಲಿ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ನಾರಾಯಣ ನಾಯ್ಕ್, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಮಂಜುನಾಥ, ಶಾಲೆಯ ಶಿಕ್ಷಕರಾದ ಉಮಾದೇವಿ, ಮಲವಿ ಆನಂದ, ಶಿಕ್ಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ವರದಿ: ಶ್ರೀನಿವಾಸ ನಾಯ್ಕ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ