Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರ ರಕ್ಷಿಸುವ ಹೊಣೆ ಎಲ್ಲರದ್ದಾಗಿದೆ: ಪ್ರೊ. ವಿಜಯ ನಾಗಣ್ಣವರ

Advertisement
ಬೆಳಗಾವಿ: ಆಧುನಿಕ ಮತ್ತು ಪ್ರಸಕ್ತ ದಿನಗಳ ಮಾನವನ ಜೀವನ ಶೈಲಿಯ ಪರಿಣಾಮದಿಂದ ಪರಿಸರ ನಾಶವಾಗುತ್ತಿದೆ. ಹವಾಮಾನ ವೈಪರೀತ್ಯದಿಂದಾಗಿ ಅತಿಯಾದ ಉಷ್ಣತೆಯನ್ನು ಎದುರಿಸುತ್ತಿದ್ದೇವೆ. ಆದ್ದರಿಂದ ಪರಿಸರ ರಕ್ಷಿಸುವ ಹೊಣೆ ಎಲ್ಲರದ್ದಾಗಿದೆ ಎಂದು ಆರ್‌ಸಿಯು ಇಂಗ್ಲೀಷ್ ಅಧ್ಯಯನ ವಿಭಾಗದ ಪ್ರೊ. ವಿಜಯ ನಾಗಣ್ಣವರ ಹೇಳಿದರು.

ಆರ್‌ಸಿಯು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಬುಧವಾರ ಏರ್ಪಡಿಸಲಾದ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಗಿಡ, ಮರಗಳ ನಾಶ ಮತ್ತು ಕಾಡುಗಳ ಅತಿಕ್ರಮಣದಿಂದ ಪರಿಸರದ ಸಮತೋಲನದಲ್ಲಿ ವ್ಯತ್ಯಾಸ ಉಂಟಾಗಿದೆ.

ಮಾನವನು ತಮ್ಮ ಜೀವನ ಸುಲಭಗೊಳಿಸಲು, ರೂಢಿಸಿಕೊಂಡ ಅನೇಕ ಉಪಕ್ರಮಗಳ ಪರಿಣಾಮ ಪರಿಸರಕ್ಕೆ ದೊಡ್ಡ ಹಾನಿ ಉಂಟು ಮಾಡುತ್ತಿರುವುದು ಸೋಜಿಗದ ಸಂಗತಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಭಾಗದ ಅಧ್ಯಕ್ಷೆ ಪ್ರೊ. ಕಮಲಾಕ್ಷಿ ತಡಸದ ಮಾತನಾಡಿ, ಪರಿಸರ ಅನುಕೂಲ ಬದುಕು ನಿರ್ವಹಣೆಗೆ ನಾವೆಲ್ಲರೂ ಮುಂದಾಗಬೇಕಿದೆ. ಪರಿಸರ ಉಳಿದರೆ ಮಾತ್ರ ಸಮಸ್ತ ಪ್ರಪಂಚ ಉಳಿಯುವುದು. ಆದ್ದರಿಂದ ಮಿತವಾದ ಪ್ಲಾಸ್ಟಿಕ್ ಬಳಕೆ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಜಲ, ವಾಯು ಮತ್ತು ಭೂ ಮಾಲಿನ್ಯದ ನಿಯಂತ್ರಣಕ್ಕೆ ಒತ್ತು ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಆರ್‌ಸಿಯು ಮುಖ್ಯ ಅವರಣದಲ್ಲಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಎನ್‌ಎಸ್‌ಎಸ್ ಸ್ವಯಂಸೇವಕರು ೧೫ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟರು,

ಪ್ರೊ. ಡಿ.ಎನ್. ಪಾಟೀಲ, ಪ್ರೊ. ವೈ, ಎಸ್, ಬಲವಂತಗೋಳ, ಪ್ರೊ. ಕೆ.ಬಿ.ಚಂದ್ರಿಕಾ , ಪ್ರೊ. ಜೆ.ಮಂಜಣ್ಣ, ಡಾ. ಸುಮಂತ ಹಿರೇಮಠ, ಪ್ರೊ. ಅಶೋಕ ಡಿಸೋಜಾ, ಪ್ರೊ. ಚಂದ್ರಕಾಂತ ವಾಘಮೋರೆ, ಡಾ.ಕಿರಣಕುಮಾರ ಪಿ. ಡಾ. ಕಿರಣಕುಮಾರ ಸವಣೂರ, ಡಾ. ರಮೇಶ ಎಂ.ಎನ್, ಡಾ. ಪ್ರಕಾಶ ಕಟ್ಟಿಮನಿ, ಡಾ. ಆಶ್ವಿನಿ ಜಾಮುನೆ ಮತ್ತು ಡಾ. ಮಲ್ಲಮ್ಮಾ ರೆಡ್ಡಿ ಸೇರಿದಂತೆ ವಿವಿಯ ವಿವಿಧ ನಿಖಾಯದ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ