ಶ್ವಾಸಕೋಶ ಸಮಸ್ಯೆಯಿಂದ ಕಳೆದ ಏಪ್ರಿಲ್ 29ರಂದು ಎಸ್.ಎಂ.ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ನಾಲ್ಕು ತಿಂಗಳ ಕಾಲ ಸುದೀರ್ಘ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಕೃಷ್ಣ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಇದೀಗ ಮತ್ತೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ.

