LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಾಜಿ KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಭೂಕಂಟಕ: FIR ದಾಖಲು

Advertisement

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಅವರ ಅಳಿಯ ಶಂಕರಗೌಡ ವಿರುದ್ಧ ಭೂಮಿ ಕಬಳಿಕೆ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. 

ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ಅಕ್ರಮವಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ನೋಂದಾಯಿಸಲಾಗಿದೆ.

ವಿಶ್ವನಾಥ್ ಪಾಟೀಲ್ ಎಂಬುವವರು ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ದೂರಿನಲ್ಲಿ ಉಲ್ಲೇಖಿಸಿರುವಂತೆ, ಶಹಾಪುರ ತಾಲೂಕಿನ ಅಣಬಿ ಗ್ರಾಮದಲ್ಲಿದ್ದ 10 ಎಕರೆ 20 ಗುಂಟೆ ಜಮೀನನ್ನು ಅಕ್ರಮವಾಗಿ ಕಬಳಿಸಲಾಗಿದೆ.

ದೂರುದಾರ ವಿಶ್ವನಾಥ್ ಅವರ ಮಲತಾಯಿ ಬಸಮ್ಮಗೌಡತಿಗೆ ಮಕ್ಕಳಿರಲಿಲ್ಲ. ಆದರೆ, ಶಿವಶಂಕರಪ್ಪ ಸಾಹುಕಾರ್ ತಮ್ಮ ಅಳಿಯ ಶಂಕರಗೌಡನನ್ನು ಬಸಮ್ಮಗೌಡತಿಯ ಮಗನೆಂದು ಸುಳ್ಳು ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಜಮೀನನ್ನು ತಮ್ಮ ಅಳಿಯನ ಹೆಸರಿಗೆ ವರ್ಗಾಯಿಸಿಕೊಂಡಿದ್ದರು.

ಅಷ್ಟೇ ಅಲ್ಲದೆ, ಜಮೀನು ಅಳಿಯ ಶಂಕರಗೌಡನ ಹೆಸರಿಗೆ ನೊಂದಾಯಿತಾದ ಕೆಲವೇ ದಿನಗಳಲ್ಲಿ ಶಿವಶಂಕರಪ್ಪ ಸಾಹುಕಾರ್ ಆ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ದೂರುದಾರರು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ದೂರಿನ ಆಧಾರದ ಮೇಲೆ ಶಹಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟರಿಗೆ ಬೆದರಿಕೆ : ಬೆಂಗಳೂರಿನ ಟೆಕ್ಕಿ ಅರೆಸ್ಟ್ ಡೀಸೆಲ್ ಬೆಲೆ ಹೆಚ್ಚಾದಾಗ ಯಾರೂ ಮಾತನಾಡಲಿಲ್ಲ : ಡಿ. ಕೆ ಶಿವಕುಮಾರ್ ಅಗ್ನಿವೀರರ ಸೇವಾ ಅವಧಿ ಮತ್ತೆ 2 ವರ್ಷ ವಿಸ್ತರಣೆ : ಕೇಂದ್ರ ಅನುಮೋದನೆ ಕಬ್ಬಿನ ಬೆಳೆಗಾರರ ಸಂಧಾನ ಸಭೆಗಳು ವಿಫಲ : ಡಿಸಿ ಕಚೇರಿಗೆ ಬೀಗ ಹಾಕಲು‌ ಯತ್ನಿಸಿದ ರೈತರು ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಸುಲಭ ಜಯಅಸ್ಸಾಮ್ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ 314 ರನ್ ಗಳ ದೊಡ್ಡ ಗೆಲುವು ಗೃಹಲಕ್ಷ್ಮಿಯರ 5 ಸಾವಿರ ಕೋಟಿ ರೂ. ಹಣ ಎಲ್ಲಿ ಹೋಯಿತು? : ನಿಖಿಲ್ ಕುಮಾರಸ್ವಾಮಿಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ನಿಯಮ ಅಪ್ರಸ್ತುತ