Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ಆರು ತಿಂಗಳಲ್ಲಿ 36,773 ಹುದ್ದೆಗಳಿಗೆ ಪರೀಕ್ಷೆ : ಪ್ರಿಯಾಂಕ್ ಖರ್ಗೆ

Advertisement

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕರ್ನಾಟಕದಲ್ಲಿ 74,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಮುಂದಿನ ಆರು ತಿಂಗಳಲ್ಲಿ 36,773 ಹುದ್ದೆಗಳಿಗೆ ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದ್ದು, ಇದಕ್ಕೆ ಸುಮಾರು 3.5 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ ಎಂದರು.

ಇತ್ತೀಚೆಗೆ ನಡೆದ ನೀಟ್ ಮತ್ತು ಸಿಬಿಎಸ್‌ಇ ಪರೀಕ್ಷೆಗಳಲ್ಲಿ ಎದುರಾದ ಸಮಸ್ಯೆಗಳನ್ನು ತಪ್ಪಿಸಲು, ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸೂಚನೆಯಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಕೆಇಎ ಮುಖಾಂತರ ರಾಂಡಮ್ ಪ್ರಶ್ನೆ ಬ್ಯಾಂಕ್ ಸಿದ್ಧಪಡಿಸಲಾಗಿದೆ. ಇದು ಪ್ರತಿ ಪ್ರಶ್ನೆಗೆ 10 ವಿವಿಧ ಆವೃತ್ತಿಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST