Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

45 ಜನರ ಗಡಿಪಾರು : ಪೊಲೀಸ್ ಆಯುಕ್ತ ಎನ್.ಶಶಿಕುಮಾರ

Advertisement
ಹುಬ್ಬಳ್ಳಿ: ವಿವಿಧ ಪ್ರಕರಣಗಳಲ್ಲಿ ಪಾಲ್ಗೊಂಡ ಹುಬ್ಬಳ್ಳಿ-ಧಾರವಾಡ ಅವಳಿನಗರ ೪೫ ಜನರನ್ನು ೬ ತಿಂಗಳವರೆಗೆ ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಹೇಳಿದರು.
ಇಲ್ಲಿನ ಉಪನಗರ ಪೊಲೀಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯುಕ್ತರು, ಕೊಲೆ(೦೮), ಕೊಲೆಗೆ ಪ್ರಯತ್ನ(೧೨), ಸುಲಿಗೆ(೦೩), ಮನೆ ಗಳ್ಳತನ(೦೧), ಮಾನಭಂಗ(೦೧), ಅಪಹರಣ(೦೧), ಎನ್‌ಡಿಪಿಎಸ್ ಕಾಯ್ದೆ(೦೯), ಅಬಕಾರಿ ಕಾಯ್ದೆ(೦೧), ಓಸಿ ಮಟ್ಕಾ/ಕ್ರಿಕೆಟ್ ಬೆಟ್ಟಿಂಗ್ ಜೂಜಾಟ(೦೬), ಹಲ್ಲೆ(೦೧), ದೊಂಬಿ(೦೨) ಪ್ರಕರಣದಲ್ಲಿ ಪಾಲ್ಗೊಂಡ ಒಟ್ಟು ೪೫ ಮಂದಿಯನ್ನು ೧೯೯೬, ೫೫ ಕಾಯ್ದೆಯಡಿ ಗಡಿಪಾರು ಮಾಡಲಾಗಿದೆ ಎಂದರು.

ಸಾಮಾನ್ಯವಾಗಿ ಚುನಾವಣೆ, ಗಲಭೆಗಳಂತ ಪ್ರಕರಣ ನಡೆದಾಗ ಗಡಿಪಾರು ಮಾಡಲಾಗುತ್ತಿತ್ತು. ಈಗ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ತಡೆಯುವ ಉದ್ದೇಶದಿಂದ ಮಾಡಲಾಗುತ್ತಿದೆ. ಆದ್ದರಿಂದ ಗಡಿಪಾರು ಮಾಡುವ ಮೂಲಕ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
೪೫ ಅಪರಾಧಿಗಳನ್ನು ಬೀದರ್, ಯಾದಗಿರಿ, ಕಲಬುರಗಿ, ದಕ್ಷಿಣ ಕನ್ನಡ ಹಾಗೂ ಚಾಮರಾಜನಗರಗಳಿಗೆ ಗಡಿಪಾರು ಮಾಡಲಾಗಿದೆ. ಗಡಿಪಾರಾದ ಅಪರಾಧಿಗಳು ಜಿಲ್ಲೆ ನಿಗದಿ ಪಡಿಸಿದ ಠಾಣೆಯಲ್ಲಿ ವರದಿ ಮಾಡಿಕೊಳ್ಳಬೇಕು. ಆದೇಶ ಉಲ್ಲಂಘಿಸಿ ಮತ್ತೆ ನಗರಕ್ಕೆ ಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟ ಪಡಿಸಿದರು.

ಇನ್ನೂ ಹಲವರು ಅಪರಾಧಿಗಳು ನಾಪತ್ತೆಯಾಗಿದ್ದು, ಅವರಿಗೆ ಶೋಧ ನಡೆಸಲಾಗು ತ್ತಿದೆ. ಅಷ್ಟೇ ಅಲ್ಲದೇ ಗುಂಡಾ ಕಾಯ್ದೆ ಹಾಕಲು ಸಹ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲಿಸಿ ಕ್ರಮಕೈಗೊಳ್ಳಲು ಠಾಣಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿಗಳಾದ ರವೀಶ ಸಿ.ಆರ್., ಮಹಾನಿಂಗ ನಂದಗಾಂವಿ ಸೇರಿದಂತೆ ಎಸಿಪಿಗಳು, ಪೊಲೀಸ್ ಇನ್‌ಸ್ಪೆಕ್ಟರ್‌ಗಳು ಪಾಲ್ಗೊಂಡಿದ್ದರು.

ವರದಿ : ಸುಧೀರ ಕುಲಕರ್ಣಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ