Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ದಾಳಿ:  ಇಬ್ಬರ ಬಂಧನ

Advertisement
ಹುಬ್ಬಳ್ಳಿತೋಟದ ಮನೆಯೊಂದರಲ್ಲಿ ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ಮದ್ಯ ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದಲ್ಲಿ ಸದ್ಯ ಇಬ್ಬರನ್ನು ಬಂಧಿಸಲಾಗಿದೆ.

ಈ ಕುರಿತಂತೆ ಧಾರವಾಡ ಜಿಲ್ಲಾ ಅಬಕಾರಿ ಉಪ ಆಯುಕ್ತ ರಮೇಶ ಕುಮಾರ್​​ ಮಾಧ್ಯಮಗಳಿಗೆ ಪ್ರತಿಕ್ರಿಯೆ ‌ನೀಡಿ, "ಛಬ್ಬಿ ಬಳಿ ತೋಟದ ಮನೆಯಲ್ಲಿ ನಕಲಿ ಮದ್ಯ ತಯಾರಿ ಮಾಡುವ ಖಚಿತ ಮಾಹಿತಿ ಮೇಲೆ ದಾಳಿ ಮಾಡಲಾಗಿದೆ. ಇಬ್ಬರನ್ನು ಬಂಧಿಸಿ ಬಂಧಿತರಿಂದ ನಕಲಿ ಮದ್ಯ ಹಾಗೂ ನಕಲಿ ಮದ್ಯ ತಯಾರಿಕೆಗೆ ಬೇಕಾಗುವ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಲೇಬಲ್ಸ್, ಅಬಕಾರಿ ಭದ್ರತಾ ಚೀಟಿಗಳನ್ನು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ" ಎಂದರು.

"ಸಮಾರು 5 ಲಕ್ಷ ಮೌಲ್ಯದ ನಕಲಿ‌ ಮದ್ಯ ಹಾಗೂ ಅದಕ್ಕೆ ಬಳಸುವ ವಸ್ತುಗಳನ್ನು ವಶಕ್ಕೆ ಪಡೆದು, ಹುಬ್ಬಳ್ಳಿಯ ಸಂದೀಪ್​ ಹಾಗೂ ಅಮೃತ್​ ಎಂಬುವರನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ‌ ವಿನಾಯಕ ಎಂಬಾತ ತಲೆಮರೆಸಿಕೊಂಡಿದ್ದು, ಆತನ ವಶಕ್ಕೆ ಪಡೆದ ಮೇಲೆ ಈ‌ ನಕಲಿ ಮದ್ಯದ ಜಾಲ ಎಲ್ಲಿಯವರೆಗೆ ಹರಡಿದೆ ಎಂಬುದು ತಿಳಿದು ಬರಲಿದೆ".

"ತೋಟದ ಮನೆಯವರಿಗೂ ಈ ನಕಲಿ ಮದ್ಯ ತಯಾರಿಕೆಗೆ ಸಂಬಂಧವಿಲ್ಲ. ಆರೋಪಿಗಳು ಗೊಬ್ಬರದ ಅಂಗಡಿ ಮಾಡುತ್ತೇವೆ ಎಂದು ತೋಟದ ಮನೆ ಬಾಡಿಗೆ ಪಡೆದುಕೊಂಡಿದ್ದಾರೆ. ಈ‌ ಕುರಿತಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುವುದು. ಇದರ ನಂತರ ಜಾಲದ ಬಗ್ಗೆ ತನಿಖೆ ನಡೆಸಲಾಗುವುದು. 24 ಬಾಕ್ಸ್​​ ನಕಲಿ‌ ಮದ್ಯದ ಬಾಕ್ಸ್​​ನಲ್ಲಿ‌ ಒಂದೊಂದು ‌ಬಾಟಲ್ ತೆಗೆಯಲಾಗಿದ್ದು, ಧಾರವಾಡದ ಲ್ಯಾಬ್​ನಲ್ಲಿ ಪರೀಕ್ಷೆಗೆ ಒಳಪಡಿಸಲಾಗುವುದು" ಎಂದು ಮಾಹಿತಿ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ