LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಹಂಚಿಕೆ: ಇಬ್ಬರು ಅರೆಸ್ಟ್! 

Advertisement

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಕಲಿ ಹಾಗೂ ದುರುದ್ದೇಶಪೂರಿತ ವಿಡಿಯೋಗಳನ್ನು ಹಂಚಿಕೊಂಡು ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ದೂರಿನ ಮೇರೆಗೆ ಬೆಂಗಳೂರು ಸಿಸಿಬಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ.

ಈ ರಾಜಕೀಯ ದುರುದ್ದೇಶದ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಕಟ್ಟುನಿಟ್ಟಿನ ಸೂಚನೆಯಂತೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಈಗಾಗಲೇ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ತಮ್ಮ ತೇಜೋವಧೆ ಮಾಡುವ ದುರುದ್ದೇಶದಿಂದಲೇ ವ್ಯವಸ್ಥಿತ ರಾಜಕೀಯ ಷಡ್ಯಂತ್ರ ರೂಪಿಸಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ಖುದ್ದು ಕಮಿಷನರ್ ಅವರಿಗೆ ದೂರು ಸಲ್ಲಿಸಿದ್ದರು. ಈ ವೇಳೆ, ತಪ್ಪು ಮಾಹಿತಿ ಹರಡುತ್ತಿದ್ದ ನಿರ್ದಿಷ್ಟ ಸಾಮಾಜಿಕ ಜಾಲತಾಣ ಖಾತೆಗಳ ಐಡಿ (ID) ವಿವರಗಳನ್ನೂ ಸಹ ಅವರು ಒದಗಿಸಿದ್ದರು.

ದೂರು ದಾಖಲಾದ ತಕ್ಷಣ ಎಚ್ಚೆತ್ತ ಸೈಬರ್ ಕ್ರೈಮ್ ಪೊಲೀಸರು ಜಾಲತಾಣಗಳ ಮೇಲೆ ತೀವ್ರ ನಿಗಾ ಇರಿಸಿ, ವಿಡಿಯೋ ಪ್ರಸಾರ ಮಾಡಿದ ಪ್ರಮುಖ ಖಾತೆಗಳ ಐಪಿ (IP) ವಿಳಾಸಗಳ ಆಧಾರದ ಮೇಲೆ ಡಿವೈಸ್ ಮಾಲೀಕರ ಜಾಡು ಹಿಡಿದು ತನಿಖೆ ನಡೆಸಿದ್ದಾರೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST