Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

26 ವರ್ಷದ ಯುವತಿ ಜೊತೆಗಿನ ಪ್ರೀತಿಗೆ ಮನೆಯವರ ವಿರೋಧ : 15 ವರ್ಷದ ಬಾಲಕ ಆತ್ಮಹತ್ಯೆ

Advertisement

ಬೆಂಗಳೂರು : 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರು ಅಡ್ಡಿಪಡಿಸಿದ ಹಿನ್ನೆಲೆ ವಿಷ ಸೇವಿಸಿ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ನಗರದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ. ಬಿಡದಿ ಮೂಲದ ಬಾಲಕ ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಮೇ.4ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಿಡದಿ ಮೂಲದ ಶೋಭಾ ಎಂಬ ಯುವತಿ ಜೊತೆ ಬಾಲಕ ಪ್ರೀತಿಯಲ್ಲಿ ಬಿದ್ದಿದ್ದ. ಈ ಬಗ್ಗೆ ಪೋಷಕರಿಗೆ ವಿಚಾರ ಗೊತ್ತಾಗಿದ್ದು, ಬಾಲಕನಿಗೆ ಬೈದು ಬುದ್ಧಿ ಹೇಳಿದ್ದರು. ನಿಮ್ಮಿಬ್ಬರಿಗೂ ವಯಸ್ಸಿನ ಅಂತರ ಇದೆ, ಇದನ್ನ ಇಲ್ಲಿಗೆ ನಿಲ್ಲಿಸುವಂತೆ ತಾಕೀತು ಮಾಡಿದ್ದರು.

ಆದರೂ ಬಾಲಕ ಹಾಗೂ ಯುವತಿ ವಾಟ್ಸಪ್, ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಇದಾದ ಬಳಿಕ ಮನೆ ಬಿಟ್ಟು ಬಂದಿದ್ದ ಬಾಲಕ ಚನ್ನಪಟ್ಟಣದ ತನ್ನ ಸ್ನೇಹಿತನ ಮನೆಯಲ್ಲಿದ್ದ.

ಯುವತಿ ಜೊತೆ ಇದೇ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಏ.29ರಂದು ವಿಷ ಸೇವಿಸಿ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಸ್ನೇಹಿತರು ಚನ್ನಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ.4ರಂದು ಬಾಲಕ ಸಾವನ್ನಪ್ಪಿದ್ದಾನೆ.

ಈ ಹಿನ್ನೆಲೆ ಮಗನ ಸಾವಿಗೆ ಯುವತಿಯೇ ಕಾರಣ ಎಂದು ಬಾಲಕನ ಪೋಷಕರು ದೂರು ನೀಡಿದ್ದು, ಈ ಸಂಬಂಧ ಶೋಭಾ ಎಂಬ ಯುವತಿ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

 

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ