LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೇರೆ ಕಡೆ ನೆಲೆಸಿದ್ದರೂ ವಂಶವೃಕ್ಷ ಸಿಗುತ್ತದೆ : ಹೈಕೋರ್ಟ್‌ 

Advertisement

ಬೆಂಗಳೂರು: ಕುಟುಂಬದ ಸದಸ್ಯರು ಬೇರೆ ಬೇರೆ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ಮಾತ್ರ ವಂಶವೃಕ್ಷ ಅಥವಾ ಕುಟುಂಬದ ಉಳಿದ ಸದಸ್ಯರ ಪ್ರಮಾಣಪತ್ರ ನೀಡಲು ನಿರಾಕರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಸ್ಪಷ್ಟಪಡಿಸಿದೆ.ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರ ಏಕಸದಸ್ಯ ಪೀಠ ಈ ಕುರಿತು ಆದೇಶ ನೀಡಿದೆ.

ಕುಟುಂಬದ ಸದಸ್ಯರು ತಹಶೀಲ್ದಾರ್‌ ವ್ಯಾಪ್ತಿಯ ಹೊರಗೆ ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ಅರ್ಜಿಯನ್ನು ತಿರಸ್ಕರಿಸಿದ್ದ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಉಪವಿಭಾಗ ತಹಶೀಲ್ದಾರ್‌ ಅವರು 2021ರ ಡಿಸೆಂಬರ್ 27ರಂದು ಬಿ.ಎಸ್. ಅಭಿನಂದನ್ ಕುಮಾರ್ ಅವರ ವಂಶವೃಕ್ಷ ಪ್ರಮಾಣಪತ್ರದ ಅರ್ಜಿಯನ್ನು ತಿರಸ್ಕರಿಸಿದ್ದರು.

ಕುಟುಂಬದ ಕೆಲವು ಸದಸ್ಯರ ವಿಳಾಸದ ದಾಖಲೆಗಳು ಮತ್ತು ಮೃತಪಟ್ಟ ಸದಸ್ಯರ ಮರಣ ಪ್ರಮಾಣಪತ್ರಗಳನ್ನು ಸಲ್ಲಿಸಿಲ್ಲ ಎಂಬುದು ಅರ್ಜಿ ತಿರಸ್ಕಾರಕ್ಕೆ ಕಾರಣವಾಗಿತ್ತು.

ಈ ಆದೇಶವನ್ನು ಪ್ರಶ್ನಿಸಿ ಅಭಿನಂದನ್ ಕುಮಾರ್ ಹೈಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿಯನ್ನು ತಿರಸ್ಕರಿಸಿದ್ದ ಉಪವಿಭಾಗಾಧಿಕಾರಿಯ ಆದೇಶವನ್ನೂ ಹೈಕೋರ್ಟ್‌ ರದ್ದುಗೊಳಿಸಿದೆ.

ಬೇರೆ ಊರಲ್ಲಿ ವಾಸಿಸಿದರೆ ಪ್ರಮಾಣಪತ್ರ ಸಿಗಲ್ವಾ?

ಕುಟುಂಬದ ಸದಸ್ಯರು ಉದ್ಯೋಗ, ಶಿಕ್ಷಣ ಅಥವಾ ಇತರ ಕಾರಣಗಳಿಂದ ಬೇರೆ ಬೇರೆ ಸ್ಥಳಗಳಲ್ಲಿ ವಾಸಿಸುತ್ತಿರಬಹುದು.

ಅವರು ಬೇರೆ ಸ್ಥಳದಲ್ಲಿ ವಾಸಿಸುತ್ತಿದ್ದಾರೆ ಎಂಬ ಕಾರಣವೊಂದನ್ನೇ ಮುಂದಿಟ್ಟುಕೊಂಡು ವಂಶವೃಕ್ಷ ಪ್ರಮಾಣಪತ್ರ ನೀಡಲು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST