Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಲಮಟ್ಟಿ ಕೃಷ್ಣ ನದಿಯಲ್ಲಿ ಮುಖ್ಯ ಮಂತ್ರಿ, ಜಲಸಂಪನ್ಮೂಲ ಸಚಿವರ ಭಾವ ಭಾವಚಿತ್ರಕ್ಕೆ ಶೃದಾಂಜಲಿ ಪಿಂಡ ಪ್ರಧಾನ ಮಾಡಿದ ರೈತ ಸಂಘ

Advertisement
ನಿಡಗುಂದಿ:-ಅಖಂಡ ಕರ್ನಾಟಕ ರೈತ ಸಂಘದದಿಂದ ವಿಶಿಷ್ಟವಾದ ಪ್ರತಿಭಟನೆ ಆಲಮಟ್ಟಿ ಲಾಲ್‌ಬಹದ್ದೂರ್ ಶಾಸ್ತ್ರಿ ಜಲಾಶಯದ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಜುರಾಲಾ ಆಣೆಕಟ್ಟಿಗೆ ನೀರು ಹರಿಸಿದನ್ನು ಖಂಡಿಸಿ ವಿಜಯಪುರದಲ್ಲಿ ಮುಖ್ಯ ಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರ ಪ್ರತಿಕೃತಿ ಧಹಿಸಿ ಪ್ರತಿಭಟನೆ ನಡೆಸಲಾಗಿತ್ತು.
ದಿನದ ಕಾರ್ಯವಾಗಿ ಶೃದಾಂಜಲಿ ಪಿಂಡ ಪ್ರಧಾನ ಕಾರ್ಯಕ್ರಮವನ್ನು ಆಲಮಟ್ಟಿಯ ಕೃಷ್ಣಾ ನದಿ ತೀರದ ಹಿನ್ನೀರಿನಲ್ಲಿ ಶೃಧಾಂಜಲಿ ಹಾಗೂ ಪಿಂಡ ಪ್ರಧಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಮೊದಲಿಗೆ ರೈತರು ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಪುಣ್ಯ ಸ್ನಾನ ಮಾಡಿದರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭಾವಚಿತ್ರಕ್ಕೆ ಕುಂಕುಮವನ್ನು ಹಚ್ಚಿ, ಮೂರು ಪಿಂಡಗಳ ಜೊತೆಗೆ ಪೂಜಾ ವಿಧಿ ವಿಧಾನವನ್ನು ನೆಡೆಯಿತು.

ಹೆಗಲ ಮೇಲೆ ನೀರಿನ ಗಡಿಗೆಯನ್ನು ಹೊತ್ತು ಮೂರು ಸುತ್ತು ಭಾವಚಿತ್ರದ ಸುತ್ತಾ ಸುತ್ತಲಾಯಿತು, ಬಾವಚಿತ್ರಕ್ಕೆ ದೀಪ ಬೆಳಗಿಸಿ ಅನ್ನದಿಂದ ತಯಾರಿಸಿದ ಪಿಂಡವನ್ನು ಇರಿಸಿ ಅದರ ಮೇಲೆ ಕರಿ ಎಳ್ಳು ಹಾಕಿ ದರ್ಬೆ ಇಟ್ಟು ಪಿಂಡ ಅರ್ಪಣೆ ಮಾಡಿ ಪೂಜೆ ಸಲ್ಲಿಸಿ ಪಿಂಡವನ್ನು ಭಾವಚಿತ್ರದೊಂದಿಗೆ ನದಿಯಲ್ಲಿ ತೇಲಿ ಬಿಡಲಾಯಿತು.

ರೈತರು ನದಿಯಲ್ಲಿಯೆ ಇಳಿದು ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು, ಈ ಸಂದರ್ಭದಲ್ಲಿ ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ ಅವಳಿ ಜಿಲ್ಲೆಯ ರೈತರ ಮೇಲೆ ಕಳ ಕಳಿ ಇಲ್ಲದ ರಾಜ್ಯ ಸರ್ಕಾರ ತೆಲಂಗಾಣ ರಾಜ್ಯಕ್ಕೆ ನಿರಂತರವಾಗಿ ನೀರು ಹರಿಸಿ ಆಲಮಟ್ಟಿ ಜಲಾಶಯದ ನೀರನ್ನು ಸಂಪೂರ್ಣ ಖಾಲಿ ಮಾಡಲು ಹೊರಟಿದೆ ತೆಲಂಗಾಣಕ್ಕೆ ನೀರು ಹರಿಸಿದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಜನ ಪ್ರತಿನಿಧಿಗಳು ಇದ್ದು ಸತ್ತಂತಿದ್ದಾರೆ ಈಗಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತೆಲಂಗಾಣಕ್ಕೆ ಹರಿಸುತ್ತಿರುವ ನೀರನ್ನು ತಕ್ಷಣದಿಂದಲೆ ಸ್ಥಗಿತಗೊಳಿಸಬೇಕು ಇಲ್ಲದಿದ್ದರೆ ಅವಳಿ ಜಿಲ್ಲೆಯ ರೈತರು ಸರ್ಕಾರದ ವಿರುದ್ಧ ಸೀಡಿದೆದ್ದು ಸರ್ಕಾರದ ವಿರುದ್ಧ ಕ್ರಾಂತಿ ಮಾಡಬೇಕಾಗುತ್ತದೆಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ಮುಖಂಡ ವಿಠ್ಠಲ ಬಿರಾದಾರ, ಈರಪ್ಪ ಹಂಚನಾಳ,ಸೋಮು ಬಿರಾದಾರ, ಬಾಲಪ್ಪಗೌಡ ಲಿಂಗದಳ್ಳಿ ಹಾದಿಮನಿ ಮಲ್ಲಪ್ಪ ಪಡಸಲಗಿ ಗಿರಿಮಲ್ಲಪ್ಪ ದೋಡಮನಿ ಪುತ್ರಪ್ಪ ಬೂದಗೋಳಿ ದಾವಲಸಾಬ ನದಾಫ ಹಣಮಂತ್ರಾಯ ಹಂದ್ರಾಳ ರಾಜೇಸಾಬ ವಾಲಿಕಾರ ಈರಣ್ಣ ದೇವರಗುಡಿ ಮೋತಿಲಾಲ್ ಲಮಾಣಿ ಶೆಟ್ಟೆಪ್ಪ ಲಮಾಣಿ ಸಿದ್ದನಗೌಡ ಕುಂಟೋಜಿ ಬಸನಗೌಡ ಪಾಟೀಲ ಚಂದ್ರಶೇಖರ ಪಾಟೀಲ ಹಣಮಂತ್ರಾಯ ಗುಣಕಿ ಇದ್ದರು.

ವರದಿ :-ಅಲಿ ಮಕಾನದಾರ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ