LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸುರೇಬಾನದಲ್ಲಿ ರೈತರ ಆಕ್ರೋಶ – ರಸ್ತೆ ಬಂದ್ ಮಾಡಿ ಬೃಹತ್ ಪ್ರತಿಭಟನೆ

Advertisement

ಸುರೇಬಾನ : ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ರೈತರು ನೀಡಿರುವ ಕರ್ನಾಟಕ ಬಂದ್ ಕರೆಗೆ ಶನಿವಾರ (ಅ.31) ರಂದು ರಾಮದುರ್ಗ ತಾಲ್ಲೂಕಿನ ಸುರೇಬಾನ ಪಟ್ಟಣದಲ್ಲಿ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ರಸ್ತೆ ಬಂದ್ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.

ಪಟ್ಟಣದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ  ಸುತ್ತಮುತ್ತಲಿನ ಹಳ್ಳಿಯ ರೈತರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದರು. ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಪಟ್ಟಣದ ಅಂಗಡಿ ವ್ಯಾಪಾರಸ್ಥರು ಕೂಡ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ರೈತರ ಬೇಡಿಕೆಗಳಿಗೆ ಬೆಂಬಲವಾಗಿ ವ್ಯಾಪಾರಸ್ಥರು ಬೀದಿಗಿಳಿದಿದ್ದು, ಪಟ್ಟಣದಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡು ಹೋರಾಟಕ್ಕೆ ಮತ್ತಷ್ಟು ಬಲ ಬಂದಿತು. ರೈತರು ಮತ್ತು ವ್ಯಾಪಾರಸ್ಥರು ಒಗ್ಗಟ್ಟಾಗಿ ರಸ್ತೆ ಬಂದ್ ಮಾಡಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದರು. ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

news_1793450546_1_832.webp

news_1793450547_4_571.webp

 

ಇದೇ ಸಂದರ್ಭದಲ್ಲಿ ಕಣ್ಣೂರು, ರಾಮದುರ್ಗ ನಗರ, ಸವದತ್ತಿ ಮತ್ತು ನರಗುಂದ ನಗರ ಸೇರಿದಂತೆ ವಿವಿಧ ಹಳ್ಳಿಗಳಿಗೆ ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಿ ರೈತರು ಆಕ್ರೋಶಭರಿತ ಪ್ರತಿಭಟನೆ ನಡೆಸಿದರು. ದಿಢೀರ್ ರಸ್ತೆ ತಡೆ ನಡೆಸಿದ ಕಾರಣದಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡರಾದ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಮೇಟಿ, ಕಾಂಗ್ರೆಸ್ ಮುಖಂಡ ಶಂಕ್ರಯ್ಯ ಚೊಕ್ಕಮಠ, ಪಿಕೆಪಿಎಸ್ ಸದಸ್ಯ ಗಿರೀಯಪ್ಪ ಹನಸಿ, ಮಾಜಿ ತಾ.ಪ ಸದಸ್ಯ ಶಿವಪ್ಪ ಮೇಟಿ, ಮಾಜಿ ಗ್ರಾಪಂ ಸದಸ್ಯ ತಿರ್ಕಪ್ಪ ಬಾಡಗಾರ ಸೇರಿದಂತೆ ಮತ್ತಿತರರು ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ. ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಕಣ್ಮುಚ್ಚಿ ಕುಳಿತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

news_1793450546_2_769.webp

 

news_1793450547_3_301.webp

 

ರೈತರ ಹೋರಾಟಕ್ಕೆ ಸ್ಪಂದಿಸದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖಂಡರು, ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಲಿ ಎಂದು ಕಿಡಿಕಾರಿದರು. ರೈತರ ಬೆವರಿನ ಮೇಲೆ ಆಡಳಿತ ನಡೆಸುವ ಸರ್ಕಾರಗಳು ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು. ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಒಟ್ಟಿನಲ್ಲಿ, ಸುರೇಬಾನ ಪಟ್ಟಣದಲ್ಲಿ ರೈತರು ಮತ್ತು ವ್ಯಾಪಾರಸ್ಥರು ಒಂದಾಗಿ ನಡೆಸಿದ ರಸ್ತೆ ಬಂದ್ ಪ್ರತಿಭಟನೆ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದು, ರೈತರ ಬೇಡಿಕೆಗಳು ಯಾವಾಗ ಈಡೇರಲಿವೆ ಎಂಬುದನ್ನು ಕಾದು ನೋಡಬೇಕಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.5ರಿಂದ ಸಾರಿಗೆ ಬಸ್ ಪ್ರಯಾಣ ದರ ಏರಿಕೆ : ಸಚಿವ ಬೈರತಿ ಸುರೇಶ್ ಘೋಷಣೆರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ! ಶೀಘ್ರದಲ್ಲೇ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ : ಡಿ.ಕೆ. ಶಿವಕುಮಾರ್ಕಿವೀಸ್ ಗೆ 192 ರನ್ ಗಳ ಟಾರ್ಗೆಟ್ ನೀಡಿದ ಭಾರತ ಪಾಕಿಸ್ತಾನ- ಒಮಾನ್ ಹಾಗೂ ಆಸ್ಟ್ರೇಲಿಯಾ- ಅಪಘಾನಿಷ್ಠಾನ್ ಪಂದ್ಯ ಇಂದು ತ್ರಿಕೋನ ಏಕದಿನ ಕ್ರಿಕೆಟ್ ಸರಣಿ: ಪಾಕಿಸ್ತಾನ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ 2-1 ರಿಂದ ಟೆಸ್ಟ್ ಸರಣಿ ಗೆದ್ದ ದ. ಆಪ್ರಿಕಾ ಪಟ್ಟಣದ ಶ್ರೀನಿಧಿ ಭಾರತ್ ಗ್ಯಾಸ್ ಗೋದಮನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಂತರಿಸುವಂತೆ ಮನವಿಎಸ್.ವಿ.ವಿ.ಕೆ.ಟ್ರಸ್ಟ್ನ ಆರ್ಯುವೇದೀಕ್ ಮೆಡಿಕಲ್ ಕಾಲೇಜ್ ಅಂತಿಮ ವಿದ್ಯಾರ್ಥಿಗಳ ವೈದ್ಯೋತ್ತಾನ ಪದವಿಪ್ರದಾನ ಕಾರ್ಯಕ್ರಮಸರ್ಕಾರದ ಕಣ್ಣಿಗೆ ಮಣ್ಣು, ಅನ್ನದಾತನ ಬದುಕಿಗೆ ಕಣ್ಣೀರು: ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ರವಿ ಪಾಟೀಲ್ ಸಿಡಿದೆದ್ದಿದ್ದು ಹೀಗೆ!