Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸದಲಗಾ ಹೆಸ್ಕಾಂ ಕಚೇರಿಯಲ್ಲಿ ಸಿಬ್ಬಂದಿ ನೇಮಕ ಮಾಡದಿದ್ದರೆ ಉಗ್ರ ಹೋರಾಟ.ಡಾಕ್ಟರ್ ಅಬ್ದುಲ್ ಕಲಾಂ ಯುವ ಸಮಾಜ ಸೇವಾ ಸಂಘದಿಂದ ಹೆಸ್ಕಾಂ ಅಧಿಕಾರಿಗಳಿಗೆ ಮನವಿ.

Advertisement

ನಿಪ್ಪಾಣಿ : ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಉಪ ವಿಭಾಗ ಕಾರ್ಯಾಲಯ ಸೇರಿ ಬೋರಗಾವ್ ಸಬ್ ಸ್ಟೇಷನ್  ವಿಭಾಗದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಿಬ್ಬಂದಿ ಕೊರತೆಯಾಗುತ್ತಿದ್ದು ಸಿಬ್ಬಂದಿಯನ್ನು ತಕ್ಷಣ ಭರ್ತಿ ಮಾಡಬೇಕೆಂದು ಆಗ್ರಹಿಸಿ ಸದಲಗಾ ನಿಪಟ್ಟಣದ ರೈತರು, ಸಾರ್ವಜನಿಕರು  ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಯುವ ಸಮಾಜ ಸೇವಾ ಸಂಘದ ವತಿಯಿಂದ ಸದಲಗಾ ಹೆಸ್ಕಾಂ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಿದರು.      ಈ ಸಂದರ್ಭದಲ್ಲಿ ಡಾಕ್ಟರ್ ಅಬ್ದುಲ್ ಕಲಾಂ ಸಂಘದ ಅಧ್ಯಕ್ಷ ಅಜರುದ್ದೀನ್ ಶೇಖಜಿ. ಮಾತನಾಡಿ ಈಗಾಗಲೇ ಹಲವು ಬಾರಿ ಸಿಬ್ಬಂದಿ ಕೊರತೆಯ ಕುರಿತು ಮೌಖಿಕವಾಗಿ ಹಾಗೂ ಲಿಖಿತವಾಗಿ ಅರ್ಜಿ ಸಲ್ಲಿಸಲಾಗಿದೆ.

ಆದರೂ ಅಧಿಕಾರಿಗಳಿಂದ ನಿರ್ಲಕ್ಷ ಧೋರಣೆ ಅನುಸರಿಸುತ್ತಿದ್ದು ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಉಡಾಫೆ ಉತ್ತರ ನೀಡಿ ರೈತರನ್ನು ಕಡೆಗಣಿಸಲಾಗುತ್ತಿದೆ. ಬರುವ ಒಂದು ವಾರದಲ್ಲಿ ಸಿಬ್ಬಂದಿ ನೇಮಕ ಮಾಡದಿದ್ದರೆ ಕಚೇರಿ ಎದುರು ಉಪವಾಸ ಸತ್ಯಾಗ್ರಹದೊಂದಿಗೆ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಸಂತೋಷ ಹೂಗಾರ,ಬಸವರಾಜ ವಾಲಿ, ಅಜರುದ್ದೀನ್ ಶೇಖಜಿ, ಸಚಿನ್ ಪಾಟೀಲ, ಪ್ರಭು ಹವಾಲ್ದಾರ್, ಸಂಜು ಕಾಂಬಳೆ,ರಾಜು ಅಮೃತಸಮ್ಮನ್ನವರ, ಶಿರೀಶ್ ಅಡಕೆ,ಸುನೀಲ್ ಬಾಗಡಿ,ಬಸವರಾಜ ಕೋಳಿ,ಪಂಕಜ ತಿಪ್ಪಣ್ಣವರ,ಮಾರುತಿ ಕಮತೆ, ಸದ್ದಾಂ ಮನೀಯರ, ಶೌಕತ್ ಅವಟಿ, ಹರೀಶ್ ಹಿತ್ತಲಮಣಿ, ಬಾದಶಾ ಕಂಪು, ಸೇರಿದಂತೆ ಸದಲಗಾ ಪಟ್ಟಣಸೇರಿ ಸುತ್ತಲಿನ ಹಳ್ಳಿಗಳ ರೈತರು,ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ : ಮಹಾವೀರ ಚಿಂಚಣೆ 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ